More

    ರಾಜ್ಯದ ಮಹಿಳಾ ಸರ್ಕಾರಿ ನೌಕರರ ಮಕ್ಕಳ ಪೋಷಣೆಗಾಗಿ 6 ತಿಂಗಳು ಹೆಚ್ಚುವರಿ ರಜೆ ; ಸರ್ಕಾರಿ ನೌಕರರ ಸಂದ ರಾಜ್ಯಾಧ್ಯಕ್ಷ ಷಡಕ್ಷರಿ ಹೇಳಿಕೆ

    ತುಮಕೂರು: ರಾಜ್ಯದ ಮಹಿಳಾ ಸರ್ಕಾರಿ ನೌಕರರು ಮಕ್ಕಳ ಪೋಷಣೆಗಾಗಿ 6 ತಿಂಗಳು ಹೆಚ್ಚುವರಿ ರಜೆ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ, ಈಗ ಒಂದು ವರ್ಷದ ರಜೆ ಸಿಗಲಿದ್ದು, ರಾಜ್ಯದ ಸರ್ಕಾರಿ ಮಹಿಳಾ ನೌಕರರ ಸಂತಸಕ್ಕೆ ಕಾರಣವಾಗಿದೆ ಎಂದು ಸರ್ಕಾರಿ ನೌಕರರ ಸಂದ ರಾಜ್ಯಾಧ್ಯಕ್ಷ ಷಡಕ್ಷರಿ ಹೇಳಿದರು.

    ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಭಾನುವಾರ ರಾಜ್ಯ ಸರ್ಕಾರಿ ನೌಕರರ ಸಂ ಹಾಗೂ ಜಿಲ್ಲಾ ಸಂದ ಸಹಯೋಗದಲ್ಲಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ಉದ್ಘಾಟಿಸಿ ವಾತನಾಡಿದ ಅವರು, ರಾಜ್ಯ ಸರ್ಕಾರದ ಪ್ರಸಕ್ತ ಬಜೆಟ್‌ನಲ್ಲಿ ಸರ್ಕಾರಿ ನೌಕರರ ಕೆಲವು ಬೇಡಿಕೆಗಳನ್ನು ಸಿಎಂ ಯಡಿಯೂರಪ್ಪ ಈಡೇರಿಸಿದ್ದಾರೆ ಎಂದರು.

    ನಮ್ಮ ನಾಲ್ಕು ಪ್ರಮುಖ ಅಂಶಗಳನ್ನು ಯಡಿಯೂರಪ್ಪ ಪರಿಗಣಿಸಿದ್ದಾರೆ. 800 ಕೋಟಿ ರೂ. ಅನುದಾನ ಬಿಡುಗಡೆ ವಾಡಿ, ಏಪ್ರಿಲ್‌ನಿಂದ ಎಲ್ಲ ಸರ್ಕಾರಿ ನೌಕರರಿಗೆ ಕ್ಯಾಶ್‌ಲೆಸ್ ವೇತನ ನೀಡಲು ಸರ್ಕಾರ ಕ್ರಮಕೈಗೊಂಡಿದೆ ಎಂದರು.
    ಎಲ್ಲ ಸರ್ಕಾರಿ ನೌಕರರು ನಿವೃತ್ತಿಯಾಗುವ ತನಕ ಸರ್ಕಾರಿ ಸೇವೆಗಳನ್ನು ಆನ್‌ಲೈನ್ ಸೇವೆಗಳನ್ನಾಗಿ ಪರಿವರ್ತಿಸಲು ಹಾಗೂ ಸರ್ಕಾರಿ ಕಚೇರಿಗಳನ್ನು ಗಣಕೀಕರಣ ವಾಡಲು ಸರ್ಕಾರ ಒಪ್ಪಿಗೆ ಸೂಚಿಸಿರುವುದು ನಮ್ಮ ಸಂಘದ ಹೋರಾಟದ ಲ ಎಂದರು.

    ಪ್ರತೀ ಜಿಲ್ಲೆಯಲ್ಲೂ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ವಾಡಬೇಕು ಎಂದು ನಿರ್ಣಯಿಸಿ, ಕಳೆದ ಬಾರಿ ದಾವಣಗೆರೆಯಲ್ಲಿ, ನಂತರ ಬೆಂಗಳೂರಿನಲ್ಲಿ ನಡೆಸಲಾಯಿತು. ಈಗ ತುಮಕೂರಿನಲ್ಲಿ ನಡೆಯುತ್ತಿದೆ. ಇನ್ನು ನಾಲ್ಕೈದು ತಿಂಗಳಲ್ಲಿ ಮತ್ತೊಂದು ಜಿಲ್ಲೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಸುವ ಮೂಲಕ ಪ್ರತಿ ಜಿಲ್ಲೆಗಳಲ್ಲೂ ಸರ್ಕಾರಿ ನೌಕರರ ಸಂಬಂಧ, ಬಾಂಧವ್ಯ ಗಟ್ಟಿಗೊಳಿಸುವ ಕಾರ್ಯಕ್ಕೆ ಮುಂದಾಗಿರುವುದಾಗಿ ತಿಳಿಸಿದರು.

    ಪ್ರತಿ ಜಿಲ್ಲೆಗಳಲ್ಲಿ ರಜಾ ದಿನಗಳಲ್ಲಿ ಇಂತಹ ಸಭೆಗಳನ್ನು ಆಯೋಜಿಸಲಾಗುವುದು, ಆ ಸಭೆಗಳಲ್ಲಿ ಸರ್ಕಾರಿ ನೌಕರರ ಸಂದ ಪದಾಧಿಕಾರಿಗಳು ಭಾಗವಹಿಸುವ ಮೂಲಕ ಚರ್ಚೆಗಳನ್ನು ವಾಡಬೇಕು, ವಿಮರ್ಶೆಗಳನ್ನು ವಾಡಬೇಕು, ಇದರಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತದೆ ಎಂದರು.

    ಸಂದ ಗೌರವಾಧ್ಯಕ್ಷ ಶಿವರುದ್ರಪ್ಪ, ಖಜಾಂಚಿ ಶ್ರೀನಿವಾಸ್, ಉಪಾಧ್ಯಕ್ಷ ರುದ್ರಪ್ಪ, ಜಿಲ್ಲಾಧ್ಯಕ್ಷರಾದ ನರಸಿಂಹರಾಜು, ಕಾರ್ಯದರ್ಶಿ ಜಗದೀಶ್ ಗೌಡ ಪಾಟೀಲ್, ಉಪಾಧ್ಯಕ್ಷ ಪರಶಿವಮೂರ್ತಿ, ರಾಜ್ಯ ಸಂಟನಾ ಕಾರ್ಯದರ್ಶಿ ರೇಣುಕಾರಾಧ್ಯ ಮತ್ತಿತರರು ಇದ್ದರು.

    ಮೂರನೇ ಬಾರಿ ರಾಜ್ಯ ಕಾರ್ಯಕಾರಿ ಸಮಿತಿ ಸಭೆ ತುಮಕೂರಿನಲ್ಲಿ ನಡೆಯುತ್ತಿದೆ. ಈ ಸಭೆಯಲ್ಲಿ ಅನೇಕ ವಿಷಯಗಳನ್ನು ಮಂಡನೆ ವಾಡುತ್ತಿದ್ದೇವೆ. ಎನ್‌ಪಿಎಸ್, ಕೇಂದ್ರ ಸರ್ಕಾರಿ ನೌಕರರ ಸರಿಸವಾನ ವೇತನ, ರಾಜ್ಯಮಟ್ಟದ ಕ್ರೀಡಾಕೂಟ, ಗುರುಭವನ ನಿರ್ವಾಣ, ಭವನ ಪುನರುಜ್ಜೀವನ, ವಸತಿಗೃಹ ಮತ್ತಿತರರ ವಿಷಯ ಚರ್ಚೆಗೆ ಬಂದಿವೆ.
    ನರಸಿಂಹರಾಜು, ಜಿಲ್ಲಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts