More

    ರಾಜ್ಯದ ಸಮಗ್ರ ಅಭಿವೃದ್ಧಿಗೆ ಡಿ.ದೇವರಾಜು ಅರಸು ನಾಂದಿ

    ಚಿಕ್ಕಬಳ್ಳಾಪುರ: ಉತ್ತಮ ಆಡಳಿತ ನೀತಿಗಳಿಂದ ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಿದವರು ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಬಣ್ಣಿಸಿದರು.

    ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 102ನೇ ಜನ್ಮದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಬಡವರ ಪರ ಚಿಂತನೆಯ ‘ಉಳುವವನೇ ಭೂ ಒಡೆಯ’ ಎಂಬ ಕಾನೂನು, ಬಡಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚು ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಮಹಿಳೆಯರಪರ ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದರು. ಅದರಲ್ಲೂ ಹಿಂದುಳಿದ ವರ್ಗಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ಸ್ಮರಿಸಿದರು.

    ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದ ಅರಸುರವರು ತಮ್ಮ ಅಧಿಕಾರಾವಧಿಯಲ್ಲಿ ಸರ್ಕಾರದ ಸವಲತ್ತುಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದವರು, ಭೂ ಸುಧಾರಣೆಯನ್ನು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಜಾರಿಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ರಾಜಾಕಾಂತ್ ಬಣ್ಣಿಸಿದರು.

    ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ, ಸದಸ್ಯ ಕೆ.ಎಂ.ಮುನೇಗೌಡ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ಫೌಜೀಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್, ನಗರಾಭಿವೃದ್ಧಿ ಕೋಶ ಯೋಜನಾಧಿಕಾರಿ ರೇಣುಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts