More

    ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ 31ಕ್ಕೆ

    ಚಿತ್ರದುರ್ಗ: ತರಾಸು ರಂಗಮಂದಿರದಲ್ಲಿ ಡಿ. 31ರಂದು ಬೆಳಗ್ಗೆ 11ಕ್ಕೆ ಕರ್ನಾಟಕ ದಲಿತ ಸಂಘರ್ಷ ರಾಜ್ಯ ಮತ್ತು ಜಿಲ್ಲಾ ಸಮಿತಿಯಿಂದ ಸಂಘಟನೆಯ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಹೆಗ್ಗರೆ ರಂಗಪ್ಪ ತಿಳಿಸಿದರು.

    ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನದ ಅಂಗವಾಗಿ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ಸಮಾವೇಶ ಆಯೋಜಿಸಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಹೋರಾಟಗಾರ ದಿ ಎಂ.ಜಯಣ್ಣ ಹೆಸರಿಡಲಾಗಿದೆ ಎಂದರು.

    ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಉದ್ಘಾಟಿಸುವರು. ಸಮಿತಿ ರಾಜ್ಯ ಸಂಚಾಲಕ ಎಂ.ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಮಾಜಿ ಸಚಿವ ಎಚ್.ಆಂಜನೇಯ ಮಹನೀಯರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸುವರು. ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ಪ್ರೊ.ಎ.ಬಿ.ರಾಮಚಂದ್ರಪ್ಪ ಉಪನ್ಯಾಸ ನೀಡುವರು. ಇದೇ ವೇಳೆ ಪ್ರಸನ್ನ ಜಯಣ್ಣ ಅವರನ್ನು ಸನ್ಮಾನಿಸಲಾಗುವುದು. ಡಿಸಿ ದಿವ್ಯಾಪ್ರಭು, ಎಸ್‌ಪಿ ಧರ್ಮೇಂದರ್‌ಕುಮಾರ್ ಮೀನಾ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಡಾ.ಬಿ.ತಿಪ್ಪೇಸ್ವಾಮಿ ಜೆ.ಜೆ.ಹಟ್ಟಿ, ಮುಖಂಡರಾದ ಜಿ.ಎಸ್.ಮಂಜುನಾಥ್, ಬಿ.ಎಂ.ಹನುಮಂತಪ್ಪ, ಬಿ.ಪಿ.ಪ್ರಕಾಶಮೂರ್ತಿ, ನರಸಿಂಹರಾಜು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಜನಸೇವಾ ಸಂಸ್ಥೆಯಿಂದ ಜಾನಪದ ಕಲಾತಂಡಗಳೊಂದಿಗೆ ಅಂದು ಬೆಳಗ್ಗೆ 10ಕ್ಕೆ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಹಮ್ಮಿಕೊಂಡಿದ್ದು, ಜಿಲ್ಲಾಧಿಕಾರಿ ವೃತ್ತದಿಂದ ರಂಗಮಂದಿರದವರೆಗೆ ಸಂಚರಿಸಲಿದೆ ಎಂದರು.

    ಸಮಿತಿಯ ಜಿಲ್ಲಾ ಸಂಚಾಲಕ ಜಿ.ಆರ್.ಪ್ರಭಾಕರ್, ರಾಜ್ಯ ಸಮಿತಿ ಸದಸ್ಯ ಶಿವಮೂರ್ತಿ ಭೀಮನಕೆರೆ, ಮಾರುತಿ ಕಡಬನಕಟ್ಟೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts