More

    ರಾಜ್ಯವ್ಯಾಪಿ ‘ನಾ ನಾಯಕಿ’ ಕಾರ್ಯಕ್ರಮ

    ದಾವಣಗೆರೆ: ಮಹಿಳಾ ಕಾರ್ಯಕರ್ತರನ್ನು ಸಂಘಟಿಸುವುದು ಹಾಗೂ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲೂಕುಗಳಲ್ಲಿ ಇನ್ನು 2-3 ತಿಂಗಳಲ್ಲಿ ‘ನಾ ನಾಯಕಿ’ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.

    ಗದಗ, ಬಳ್ಳಾರಿ, ಬಿಟಿಎಂ ಲೇ ಔಟ್ ಹಾಗೂ ಸುಳ್ಯ ನಾಲ್ಕು ಕಡೆಗಳಲ್ಲಿ ಪ್ರಾಯೋಗಿಕವಾಗಿ ಈ ಕಾರ್ಯಕ್ರಮ ನಡೆಸಿ, ನಂತರದಲ್ಲಿ ಎಲ್ಲ ತಾಲೂಕಿಗೂ ವಿಸ್ತರಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಈ ಹಿಂದಿನ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿತ್ತು. 28 ನಿಗಮ ಮಂಡಳಿ ಹಾಗೂ 15 ವಿಧಾನಸಭೆ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಇನ್ನು 2-3 ತಿಂಗಳಲ್ಲಿ ನೀಲಿನಕ್ಷೆ ತಯಾರಾಗಲಿದ್ದು ಕಣದ ಚಿತ್ರಣ ಸಿಗಲಿದೆ. ಆಗ ಆದ್ಯತೆ ಮೇರೆಗೆ ಗೆಲುವಿನ ಮಾನದಂಡದಡಿ ಮಹಿಳೆಯರಿಗೆ ಹೆಚ್ಚಿನ ಟಿಕೆಟ್ ಕೇಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
    ಅಕ್ಟೋಬರ್ 2ರಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಭಾರತ್ ಜೋಡೋ ಕಾರ್ಯಕ್ರಮದ ಭಾಗವಾಗಿ ಪಾದಯಾತ್ರೆ ನಡೆಸುವರು. ರಾಜ್ಯದಲ್ಲಿ 21 ದಿನ ಕಾಲ ಸಂಚರಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಕೈ ಜೋಡಿಸಲಿದೆ ಎಂದು ಹೇಳಿದರು.
    ಸುದ್ದಿಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಸುಷ್ಮಾ ಪಾಟೀಲ್, ಶುಭಮಂಗಳಾ, ಗೀತಾ ಪ್ರಶಾಂತ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts