More

    ರಾಜ್ಯೋತ್ಸವ ಅರ್ಥಪೂರ್ಣವಾಗಿರಲಿ

    ಸರಗೂರು: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಹಸಿಲ್ದಾರ್ ಪರಶಿವಮೂರ್ತಿ ಹೇಳಿದರು.

    ಸರಗೂರು ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಏರ್ಪಡಿಸಿದ್ದ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಮತ್ತು ವಿವಿಧ ಸಂಘಟನೆಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನ. 1ರಂದು ಜಯ ಚಾಮರಾಜ ಕ್ರೀಡಾಂಗಣದಲ್ಲಿ ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ಮಾಡಲಾಗುವುದು .

    ಭುವನೇಶ್ವರಿ ಭಾವಚಿತ್ರವನ್ನು ಪ್ರಮುಖ ಬೀದಿಗಳಲ್ಲಿ ಶಾಲಾ ಮಕ್ಕಳು, ಅಧಿಕಾರಿಗಳು, ಸಾರ್ವಜನಿಕರೊಂದಿಗೆ ಮೆರವಣಿಗೆ ಮೂಲಕ ಜಯಚಾಮರಾಜ ಕ್ರೀಡಾಂಗಣದಲ್ಲಿ ಸೇರಿ ಸಾಂಸ್ಕೃತಿಕ ಚಟುವಟಿಕೆ ನಡೆಸಲಾಗುವುದು. ಕಾರ್ಯಕ್ರಮಕ್ಕೆ ಭಾಗವಹಿಸುವ ಶಾಲಾ ಮಕ್ಕಳಿಗೆ ತಿಂಡಿ ಹಾಗೂ ಸಿಹಿ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

    ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನಿಸಲಾಗುವುದು. 10ನೇ ತರಗತಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ವಿವಿಧ ಕಲಾತಂಡಗಳು ಭಾಗವಹಿಸಲು ಅವಕಾಶ ಮಾಡಿಕೊಡಲಾಗುವುದು. ಕಾರ್ಯಕ್ರಮ ನಡೆಯುವ ಕ್ರೀಡಾಂಗಣ ಸ್ವಚ್ಛಗೊಳಿಸಿ ತಳಿರು ತೋರಣ ಕಟ್ಟುವ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.

    ತಾಲೂಕಿನ 23 ಇಲಾಖೆಯಲ್ಲಿ 14 ಇಲಾಖೆ ಅಧಿಕಾರಿಗಳು ಸಭೆಗೆ ಹಾಜರಾಗಿದ್ದರು. ಇನ್ನೂ ಉಳಿದ ಅಧಿಕಾರಿಗಳು ಸಭೆಗೆ ಗೈರು ಹಾಜರಾದa ಇಲಾಖೆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗುವುದು ಎಂದು ತಹಸೀಲ್ದಾರ್ ಹೇಳಿದರು.

    ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹೆಗ್ಗನೂರು ನಿಂಗರಾಜು ಮಾತನಾಡಿ, ನೂತನ ತಾಲೂಕು ರಚನೆಗೊಂಡಿದೆ. ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನೀವುಗಳು ಕಾಟಾಚಾರಕ್ಕೆ ಸಭೆಗಳನ್ನು ಮಾಡಬೇಡಿ. ಸಂಘ, ಸಂಸ್ಥೆಗಳ ಮುಖಂಡರು ಜತೆಗೂಡಿ ಚರ್ಚೆ ನಡೆಸಿ ನಂತರ ವಿವಿಧ ಎಲ್ಲ ಇಲಾಖೆಗಳಿಗೆ ಜವಾಬ್ದಾರಿಯನ್ನು ನೀಡಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಬೇಕು ಎಂದು ಆಗ್ರಹಿಸಿದರು.

    ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧಿಕಾರಿ ಸುಷ್ಮಾ, ಸಮಾಜ ಕಲ್ಯಾಣ ಇಲಾಖೆಯ ನಾರಾಯಣಸ್ವಾಮಿ, ಪಪಂ ಅಧ್ಯಕ್ಷೆ ರಾಧಿಕಾ ಶ್ರೀನಾಥ್, ಸಬ್ ಇನ್ಸ್‌ಪೆಕ್ಟರ್ ನಂದೀಶ್ ಕುಮಾರ್, ಪಪಂ ಸದಸ್ಯರಾದ ಶ್ರೀನಿವಾಸ, ಶಿವಕುಮಾರ್, ಚಲುವಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಕಟದ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ದಸಂಸ ಮುಖಂಡರಾದ ಹೆಗ್ಗನೂರು ನಿಂಗರಾಜು, ಶಿವಶಂಕರ್, ಪುಟ್ಟ ಹನುಮಯ್ಯ, ಚೆನ್ನಪ್ಪ, ಮಹೇಶ್, ಹಳಿಯೂರು ನಾಗಯ್ಯ ಮತ್ತಿತರರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts