More

    ರಾಜ್ಯೋತ್ಸವ ಮೆರವಣಿಗೆ ನಿಷೇಧಕ್ಕೆ ಖಂಡನೆ

    ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಆಚರಣೆ ವೇಳೆ ಅದ್ದೂರಿ ಮೆರವಣಿಗೆಗೆ ಅವಕಾಶ ನೀಡದ ಜಿಲ್ಲಾಡಳಿತದ ಕ್ರಮಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಭೆಯಲ್ಲಿ ಹೋರಾಟಗಾರರು ಅಸಮಾಧಾನ ವ್ಯಕ್ತಪಡಿಸಿ, ಮೆರವಣಿಗೆಗೆ ಅವಕಾಶ ನೀಡಲೇಬೇಕು ಎಂದು ಒತ್ತಾಯಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಅದ್ದೂರಿ ಮೆರವಣಿಗೆ ಇಲ್ಲದ ರಾಜ್ಯೋತ್ಸವಕ್ಕೆ ನಮ್ಮ ಸಮ್ಮತಿ ಇಲ್ಲ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅ. 22ರ ಒಳಗೆ ನಿರ್ಧಾರ ಪ್ರಕಟಿಸಬೇಕು. ಅಲ್ಲಿಯವರೆಗೆ ರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ ನಡೆಯುವ ಉಪ ಸಮಿತಿಗಳ ಸಭೆಗೆ ನಾವು ಹಾಜರಾಗುವುದಿಲ್ಲ. ಬೆಳಗಾವಿಯ ಎಲ್ಲ ಶಾಸಕರು ಸರ್ಕಾರದ ಮೇಲೆ ಒತ್ತಡ ತರುವ ಮೂಲಕ ಮೆರವಣಿಗೆಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಅಧಿಕಾರಿಗಳು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳಿಗೆ ಕರೆ ಮಾಡಿ, ಮೆರವಣಿಗೆಗೆ ಅವಕಾಶ ಕೊಡುವುದಿಲ್ಲ ಎಂದು ತಿಳಿಸುತ್ತಿದ್ದಾರೆ. ಉತ್ಸವವನ್ನು ಅದ್ದೂರಿಯಾಗಿ ಆಯೋಜಿಸಲಾಗುವುದು. ಯಾವುದಕ್ಕೂ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಪ್ರಕಟಿಸಿದ್ದರು. ಈಗ ಕರೊನಾ ಕಾರಣ ಮುಂದಿಡುತ್ತಿರುವುದು ಸರಿಯಲ್ಲ ಎಂದರು.

    ಮೆರವಣಿಗೆಗೆ ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಬೇಕು. ಕನ್ನಡ ಸಂಘಟನೆಗಳ ಸ್ಪಷ್ಟ ನಿರ್ಧಾರವನ್ನು ತಿಳಿಸಲು ಅ. 18ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಭೇಟಿಯಾಗುತ್ತೇವೆ. ಮನವಿ ಸಲ್ಲಿಸುತ್ತೇವೆ ಎಂದು ಮಾಹಿತಿ ನೀಡಿದರು.

    ಮುಖಂಡರಾದ ರಮೇಶ ಸೊಂಟಕ್ಕಿ, ಮಹಾದೇವ ತಳವಾರ, ಮೆಹಬೂಬ ಮಕಾನದಾರ, ದೀಪಕ ಗುಡಗನಟ್ಟಿ, ಮಹಾಂತೇಶ ರಣಗಟ್ಟಿಮಠ, ಬಾಬು ಸಂಗೋಡಿ, ಸಾಗರ ಬೋರಗಲ್ಲ, ಕಸ್ತೂರಿ ಭಾವಿ, ವಾಜೀದ ಹಿರೇಕೋಡಿ, ಆರ್.ಅಭಿಲಾಷ, ಸಂಜಯ ರಜಪೂತ, ಗಣೇಶ ರೋಖಡೆ ಇತರರಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts