More

    ರಾಜ್ಯ, ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

    ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಕಷ್ಟಗಳಿಗೆ ಸ್ಪಂದನೆ ನೀಡುತ್ತಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ನಾಯಕರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದರು.

    ಕಾಂಗ್ರೆಸ್ ನಾಯಕರು ಇಲ್ಲಿನ ಗಾಂಧಿನಗರದಿಂದ ನವಲೂರ್ ಕ್ರಾಸ್​ವರೆಗೂ ಚಕ್ಕಡಿ ಮೆರವಣಿಗೆ ನಡೆಸಿ, ಅಲ್ಲಿ ಕೆಲ ಕಾಲ ರಸ್ತೆ ತಡೆ ನಡೆಸಿ ಸರ್ಕಾರಗಳ ವಿರುದ್ಧ ಹರಿಹಾಯ್ದರು.

    ಅತಿವೃಷ್ಟಿಯಿಂದ ರೈತರು, ಸಾಮಾನ್ಯ ಜನರು ತೀವ್ರ ತೊಂದರೆಯಲ್ಲಿದ್ದಾರೆ. ಹಲವರು ಮನೆ ಕಳೆದುಕೊಂಡಿದ್ದಾರೆ. ರೈತರ ಬೆಳೆ ಹಾನಿಯಾಗಿದೆ. ಆದಾಗ್ಯೂ ಸರ್ಕಾರಗಳು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಪರಿಹಾರ ನೀಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

    ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ, ಕಳೆದ ವರ್ಷದ ನೆರೆ ಹಾನಿಯ ಪರಿಹಾರವೇ ಸಂತ್ರಸ್ತರಿಗೆ ಸಿಗದಿರುವುದು ಸರ್ಕಾರದ ದಿವ್ಯ ನಿರ್ಲಕ್ಷ್ಯ್ಕೆ ಹಿಡಿದ ಕನ್ನಡಿಯಾಗಿದೆ. ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ಕಾರ ಜನ ವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಲಾಕ್​ಡೌನ್ ಅವಧಿಯಲ್ಲಿ ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಇಂಧನ ಬೆಲೆ ಏರಿಕೆ ಬರೆ ಎಳೆದಿದೆ ಎಂದು ಆರೋಪಿಸಿದರು.

    ನಂತರ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರಗೆ ಮನವಿಪತ್ರ ಸಲ್ಲಿಸಿದರು. ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ, ಅಂಜಲಿ ನಿಂಬಾಳಕರ, ಪ್ರಸಾದ ಅಬ್ಬಯ್ಯ, ಕುಸುಮಾವತಿ ಶಿವಳ್ಳಿ, ಜಿಲ್ಲಾಧ್ಯಕ್ಷ ಅಲ್ತಾಫ್ ಹಳ್ಳೂರ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಮುಖಂಡರಾದ ಅನೀಲ ಪಾಟೀಲ, ನಾಗರಾಜ ಗೌರಿ, ಮಹಾಂತೇಶ ಕೌಜಲಗಿ, ದೀಪಾ ಗೌರಿ, ಹನುಮಂತ ಕೊರವರ, ಮಹಾವೀರ ಶಿವಣ್ಣವರ, ಮಂಜುನಾಥ ಕಟ್ಟಿ, ಶಂಕರ ಮುಗಳಿ, ಈರಣ್ಣ ಮಲ್ಲಿಗವಾಡ, ಸಿದ್ಧಾರೂಢ ಶೀಶನಳ್ಳಿ, ಷಣ್ಮುಖ ಬೆಟಗೇರಿ, ಸಂಗೀತಾ ಪೂಜಾರಿ, ಶೋಭಾ ಕಮತರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts