More

    ರಾಜ್ಯ ಸರ್ಕಾರದಿಂದ ರಾಜ್ಯದ ಖಜಾನೆ ಲೂಟಿ:ಕಾಂಗ್ರೆಸ್ ವಿರುದ್ಧ ಹರಿಹಾಯ್ದೆ ಶಾಸಕ ಎಚ್.ಡಿ. ರೇವಣ್ಣ

    ಹಾಸನ: ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಆಡಳಿತ ನಡೆಸುತ್ತಿದ್ದು, ರಾಜ್ಯದ ಖಜಾನೆಯನ್ನು ಲೂಟಿ ಮಾಡುವ ಮೂಲಕ ಜನರಿಗೆ ಟೋಪಿ ಹಾಕಿದೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಆರೋಪಿಸಿದರು.
    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 12 ತಿಂಗಳಿನಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡದೆ, ಕೇವಲ ಗ್ಯಾರಂಟಿ ಮೂಲಕ ಜನರಿಗೆ ದಾರಿ ತಪ್ಪಿಸಲು ಹೊರಟಿದೆ. ಜಿಲ್ಲೆಗೆ ಕಾಂಗ್ರೆಸ್ ಕೊಡುಗೆ ಏನು ಎಂಬುದನ್ನು ಬಹಿರಂಗಪಡಿಸಲಿ. ನಮ್ಮ ಸರ್ಕಾರದ ಅವಧಿಯಲ್ಲಿ ಜಿಲ್ಲೆಗೆ ಆಸ್ಪತ್ರೆ, ರಸ್ತೆ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಬರಗಾಲ ಬಂದಿದ್ದು ಜನರು ತತ್ತರಿಸಿದ್ದಾರೆ. ಇದರ ನಡುವೆ ಬೆಲೆ ಏರಿಕೆ ಬಿಸಿಯೂ ಕೂಡ ಹೆಚ್ಚಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೂ ಕೂಡ ಅನ್ಯಾಯ ಮಾಡಿದೆ. ಜಿಲ್ಲೆಯಲ್ಲಿ 4000 ಬೋರ್‌ವೆಲ್ ಕೊರೆಸಿದ್ದು, ಇದುವರೆಗೂ ವಿದ್ಯುತ್ ಸಂಪರ್ಕ ಕೊಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.
    ಪ್ರಜ್ವಲ್ ರೇವಣ್ಣ ಮತ್ತು ದೇವೇಗೌಡರ ಕುಟುಂಬ ಜಿಲ್ಲೆಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ಜಿಲ್ಲೆಯಲ್ಲಿ ಆಗಿರುವ ಎಲ್ಲಾ ಅಭಿವೃದ್ಧಿ ಕೆಲಸಗಳು ಕೂಡ ನಮ್ಮ ಅವಧಿಯಲ್ಲಿ. ಕಾಂಗ್ರೆಸ್‌ನ ಕೊಡುಗೆ ಏನೆಂಬುದನ್ನು ಅವರು ಬಯಸಂಗಪಡಿಸಲಿ. ಈಗಾಗಲೇ ಸರ್ಕಾರದ ಖಜಾನೆಯನ್ನು ಲೂಟಿ ಮಾಡಿ ಜನರಿಗೆ ಚೊಂಬು ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಲಿದೆ. ಜೂ.4 ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಕೊಬ್ಬರಿ ಖರೀದಿ ಮತ್ತು ಇನ್ನಿತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts