More

    ರಾಜ್ಯ ಸರ್ಕಾರದಿಂದ ಶಿಕ್ಷಕರ ಮೇಲೆ ಒತ್ತಡ

    ಶಿವಮೊಗ್ಗ: ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ಸಂಪೂರ್ಣ ವಿಫಲವಾಗಿದ್ದು ಶಿಕ್ಷಕರ ಮೇಲೆ ಮಾನಸಿಕವಾಗಿ ಒತ್ತಡ ಹಾಕುತ್ತಿದೆ. ಹಾಗಾಗಿ ಹಳಿ ತಪ್ಪಿರುವ ಶಿಕ್ಷಣ ವ್ಯವಸ್ಥೆಯನ್ನು ಮತ್ತೆ ಸರಿದಾರಿಗೆ ತರಲು ಸರ್ಕಾರಕ್ಕೆ ಕಾಂಗ್ರೆಸ್ ಹಕ್ಕೊತ್ತಾಯ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.

    ಕರೊನಾ ನಿಯಂತ್ರಣದ ನೆಪದಲ್ಲಿ ಪೂರ್ವ ಯೋಜನೆ ಇಲ್ಲದೆ ಲಾಕ್​ಡೌನ್ ಹೇರಿದ ಪರಿಣಾಮ ಎಲ್ಲ ವರ್ಗಕ್ಕೂ ಸಂಕಷ್ಟ ಎದುರಾಯಿತು. ಅದಕ್ಕೆ ಶಿಕ್ಷಣ ಕ್ಷೇತ್ರ ಕೂಡ ಹೊರತಾಗಿಲ್ಲ. ಇದೀಗ ಆನ್​ಲೈನ್ ನೆಪದಲ್ಲಿ ಶಿಕ್ಷಕರ ಜತೆಗೆ ಮಕ್ಕಳ ಭವಿಷ್ಯಕ್ಕೂ ಸರ್ಕಾರ ಕುತ್ತು ತರುತ್ತಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

    ರಾಜ್ಯದಲ್ಲಿ 80 ಲಕ್ಷ ಮಕ್ಕಳು ಓದುತ್ತಿದ್ದಾರೆ. ಅದರಲ್ಲಿ ಶೇ.60 ಮಕ್ಕಳಿಗೆ ಆನ್​ಲೈನ್ ಶಿಕ್ಷಣ ಸಿಗುತ್ತದೆ. ಇನ್ನುಳಿದ ಬಡ ಮಕ್ಕಳು ಆನ್​ಲೈನ್ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದರಿಂದ ಬಡಮಕ್ಕಳು ಖಿನ್ನತೆಗೆ ಒಳಗಾಗಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ತಾರತಮ್ಯ ಏರ್ಪಟ್ಟಿದೆ ಎಂದರು.

    ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳಿಗೆ ಬಿಸಿಯೂಟ ಇಲ್ಲ. ಮಕ್ಕಳನ್ನು ಕರೆದೊಯ್ಯುವ ಶಾಲಾ ವಾಹನಗಳ ಚಾಲಕರು ಮತ್ತು ಕ್ಲೀನರ್​ಗಳಿಗೆ ಕೆಲಸವಿಲ್ಲ. ಪ್ರಸ್ತುತ ಅವ್ಯವಸ್ಥೆ ನೇರ ಪರಿಣಾಮ ಮಕ್ಕಳ ಮೇಲೆ ಬೀರುತ್ತಿದೆ. ಶೇ.53.75 ಮಕ್ಕಳು ಎಲ್ಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. 50 ಸಾವಿರ ಸರ್ಕಾರಿ ಶಾಲೆಗಳಲ್ಲಿ ಶೇ.10 ಶಾಲೆಗಳಲ್ಲಿ ಕಂಪ್ಯೂಟರ್ ಇಲ್ಲ. ಬಿಸಿಯೂಟ, ಹಾಲಿನ ಪೌಡರ್ ತಲುಪಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಸಿಎಂ ಬಿ.ಎಸ್.ಯಡಿಯೂರಪ್ಪ ಶಿಕ್ಷಣ ವ್ಯವಸ್ಥೆ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಶಿಕ್ಷಣ ಸಚಿವ ಸುರೇಶ್​ಕುಮಾರ್ ಪ್ರಚಾರಕ್ಕೆ ಸೀಮಿತವಾಗಿದ್ದಾರೆ. ಶಾಲೆಯಲ್ಲಿ ಕಸ ಗುಡಿಸುವವರಿಲ್ಲ. ಶ್ರೀಮಂತ ಮಕ್ಕಳಿಗೆ ಮಾತ್ರ ಶಿಕ್ಷಣ ಸಿಗುವಂತಾಗಿದೆ. ಒಟ್ಟಾರೆ ಎಲ್ಲ ರಂಗಗಳಲ್ಲೂ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಚಂದ್ರಭೂಪಾಲ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts