More

    ರಾಜ್ಯ ಸರ್ಕಾರದಿಂದ ಸಂವಿಧಾನ ಜಾಗೃತಿ ಜಾಥಾ

    ಚಿತ್ರದುರ್ಗ: ಗಣರಾಜ್ಯೋತ್ಸವ ಅಂಗವಾಗಿ ಜಿಲ್ಲೆಯಲ್ಲಿ ಜ.26 ರಿಂದ ಫೆ. 23 ರವರೆಗೆ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾದ ಸ್ತಬ್ದಚಿತ್ರ ವಾಹನಕ್ಕೆ ಸಚಿವ ಡಿ.ಸುಧಾಕರ್ ಅವರು ಶುಕ್ರವಾರ ಸೈನ್ಸ್ ಕಾಲೇಜ್ ಮೈದಾನದಲ್ಲಿ ಹಸಿರು ನಿಶಾನೆ ತೋರಿಸಿದರು.
    ಭಾರತದ ಸಂವಿಧಾನ ಅಂಗೀಕಾರವಾಗಿ 75 ವರ್ಷಗಳಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿ ದೆ. ಸ್ತಬ್ದಚಿತ್ರದ ವಾಹನ ಜಿಲ್ಲೆಯ ಎಲ್ಲ 189 ಗ್ರಾಪಂಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಚರಿಸಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ. ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಚಿವರು ಕೋರಿದರು.
    ಫೆ.25 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ರಾಷ್ಟ್ರಮಟ್ಟದ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಸಿಎಂ ಸಿದ್ದ ರಾಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
    ಇದೇ ವೇಳೆ ಸಂವಿಧಾನದ ಪೀಠಿಕೆ ಓದಲಾಯಿತು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಪಂ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಎಸ್‌ಪಿ ಧರ್ಮೇಂದರ್‌ಕುಮಾರ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಇಲಾಖೆ ಜಿಲ್ಲಾ ನೋಡಲ್ ಅಧಿಕಾರಿ ಚಂದ್ರಕಲಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪರಮೇಶ್ವರ ಮತ್ತಿತರರು ಇದ್ದರು.

    ಆಕರ್ಷಕ ಸ್ತಬ್ದಚಿತ್ರ
    ಜಿಲ್ಲೆಯ ಐತಿಹಾಸಿಕ ಮಹತ್ವ ಹಾಗೂ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ನಿಟ್ಟಿನಲ್ಲಿ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರವನ್ನು ಆಕರ್ಷಕ ವಾಗಿ ನಿರ್ಮಿಸಲಾಗಿದೆ. ವಾಹನದ ಮುಂಭಾಗದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಇದೆ. ಬುದ್ಧ, ಬಸವಣ್ಣಹಾಗೂ ವೀರ ಮದಕರಿ ನಾಯಕರ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ವಾಹನದ ಮಧ್ಯಭಾಗದಲ್ಲಿ ವೀರವನಿತೆ ಒನಕೆ ಓಬವ್ವ ಪುತ್ಥಳಿ ಇದೆ.
    ಸರ್ಕಾರಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಬಿಂಬಿಸುವ ಪ್ರತಿಕೃತಿ ರಚಿಸಲಾಗಿದೆ. ಗ್ಯಾರಂಟಿಗಳ ಲಾಂಛನಗಳನ್ನು ಅಳವಡಿಸಲಾಗಿದೆ. ವಾಹನದ ಇಕ್ಕೆಲಗಳಲ್ಲಿ ಕೋಟೆ ಚಿತ್ರಣವಿದೆ. ಎಲ್‌ಇಡಿ ಪರದೆಯಲ್ಲಿ ಸಂವಿಧಾನ ಪೀಠಿಕೆ, ಸಂವಿಧಾನ ರಚನೆ ಹಾಗೂ ಸರ್ಕಾರ ಸಾಧನೆಯ ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಲಾಗುತ್ತಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts