More

    ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಘಟಿಕೋತ್ಸವ ನಾಳೆ

    ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ(ಆರ್‌ಸಿಯು)ದ 9ನೇ ಘಟಿಕೋತ್ಸವ ಮಾ.9ರಂದು ಜರುಗಲಿದ್ದು, ಗೌರವ ಡಾಕ್ಟರೇಟ್ ಪದವಿಗೆ ಮೂವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದ್ದಾರೆ.

    ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸುವರ್ಣ ವಿಧಾನಸೌಧ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋತ್ ವಹಿಸಲಿದ್ದಾರೆ. ಅಂತಾರಾಷ್ಟ್ರೀಯ ಅಧ್ಯಯನ ಕೇಂದ್ರದ ಮಾಜಿ ಅಧ್ಯಕ್ಷ ಪ್ರೊ.ವಿ.ಎಸ್.ಚೌವ್ಹಾಣ ಘಟಿಕೋತ್ಸವದ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾಗವಹಿಸಲಿದ್ದಾರೆ ಎಂದರು.

    ಘಟಿಕೋತ್ಸವದಲ್ಲಿ 35,484 ಸ್ನಾತಕ ವಿದ್ಯಾರ್ಥಿಗಳು, 2,739 ಸ್ನಾತಕೋತ್ತರ ವಿದ್ಯಾರ್ಥಿಗಳು, 188 ಪಿಜಿ ಡಿಪ್ಲೊಮಾ ವಿದ್ಯಾರ್ಥಿಗಳು ಪದವಿ ಪಡೆದುಕೊಳ್ಳಲಿದ್ದಾರೆ. 10 ಸುವರ್ಣ ಪದಕಗಳನ್ನು ಸ್ನಾತಕೋತ್ತರ ಮತ್ತು ಸ್ನಾತಕ ವಿದ್ಯಾರ್ಥಿಗಳಿಗೆ ನೀಡಲಾಗುವುದು. 86 ಪಿಎಚ್.ಡಿ. ಪದವಿ ಪ್ರದಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
    ರಾಣಿ ಚನ್ನಮ್ಮ ವಿವಿ ವ್ಯಾಪ್ತಿಯ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ 408 ಮಹಾವಿದ್ಯಾಲಯಗಳು ಕಾರ್ಯನಿರ್ವಹಿಸುತ್ತಿವೆ. 1.50 ಲಕ್ಷ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 42 ಕಾಲೇಜುಗಳಲ್ಲಿ ಸ್ನಾತಕೋತ್ತರ ಕೇಂದ್ರಗಳಲ್ಲಿ ಉನ್ನತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ವಿವರಿಸಿದರು. ಕುಲಸಚಿವ (ಮೌಲ್ಯಮಾಪನ) ಪ್ರೊ.ವೀರನಗೌಡ ಪಾಟೀಲ, ಕುಲಸಚಿವ (ಆಡಳಿತ) ಪ್ರೊ.ಬಸವರಾಜ ಪದ್ಮಶಾಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್.ಪಾಟೀಲ ಇತರರಿದ್ದರು.

    ಮೂವರಿಗೆ ಡಾಕ್ಟರೇಟ್ ಪದವಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿಗೆ ಸಂಗೀತ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ, ವೈದ್ಯಕೀಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಡಾ.ಎಚ್.ಸುದರ್ಶನ ಬಲ್ಲಾಳ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ವಾದಿರಾಜ ಜಿ.ದೇಶಪಾಂಡೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ತಿಳಿಸಿದರು.

    10 ಚಿನ್ನದ ಪದಕ ಪ್ರದಾನ: ಬಾಗಲಕೋಟೆ ಬಸವೇಶ್ವರ ಕಾಲೇಜಿನ ಸೌಮ್ಯ ಕುಂಬಾರ ಎರಡು ಬಂಗಾರದ ಪದಕ ಪಡೆದುಕೊಂಡಿದ್ದಾರೆ. ಬೆಳಗಾವಿಯ ಗೋಗಟೆ ಕಾಲೇಜಿನ ಅಕ್ಷತಾ ಬಾಲಕೃಷ್ಣ ಭಟ್, ಜಮಖಂಡಿಯ ತುಂಗಳ ಸ್ಕೂಲ್ ಆಫ್ ಬೇಸಿಕ್ ಆ್ಯಂಡ್ ಅಪ್ಲೈಡ್ ಸೈನ್ಸ್ ಕಾಲೇಜಿನ ಸಾವಿತ್ರಿ ಹಿರೇಮಠ, ಅರ್ಸಿಯು ಪಿಜಿ ಕ್ಯಾಂಪಸ್‌ನ ಶ್ವೇತಾ ಗುಳಣ್ಣವರ, ಬಾಗಲಕೋಟೆ ಯ ಬಿವಿವಿ ಸಂಘದ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ ಕಾಲೇಜಿನ ಸಪ್ನಾ ಕಜೂರ, ನಿಪ್ಪಾಣಿಯ ಕೆ.ಎಲ್.ಇ ಸಂಸ್ಥೆಯ ಜಿ.ಐ.ಬಾಗೇವಾಡಿ ಕಾಲೇಜಿನ ಜ್ಯೋತಿ ಚವ್ಹಾಣ, ಮಹಾಲಿಂಗಪುರದ ಎಸ್.ಸಿ.ಪಿ ಆರ್ಟ್ಸ್, ಡಿಡಿಎಸ್ ಕಾಮರ್ಸ್ ಕಾಲೇಜಿನ ಗಾಯತ್ರಿ ಬಾಗೇವಾಡಿ, ಗೋಕಾಕ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸವಿತಾ ಪರಕನಟ್ಟಿ ಮತ್ತು ಸಾವಳಗಿಯ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸುರೇಶ ಬಿದರಿ ತಲಾ ಒಂದು ಬಂಗಾರದ ಪದಕ ಪಡೆದುಕೊಂಡಿದ್ದಾರೆ ಎಂದು ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts