More

    ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ

    ಚನ್ನರಾಯಪಟ್ಟಣ: ಸರ್ಕಾರಗಳ ಎಲ್ಲ ಯೋಜನೆಗಳು ಪರಿಣಾಮಕಾರಿ ಅನುಷ್ಠಾನವು ಸಂಬಂಧಿಸಿದ ಇಲಾಖೆಗೆ ಮಾತ್ರ ಸೀಮಿತವಲ್ಲ, ಪ್ರತಿಯೊಂದು ಇಲಾಖೆಯ ಜವಾಬ್ದಾರಿ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಸಿ.ದೀಪು ಅಭಿಪ್ರಾಯಪಟ್ಟರು.

    ತಾಲೂಕಿನ ದಂಡಿಗನಹಳ್ಳಿ ಹೋಬಳಿಯ ಶ್ರೀನಿವಾಸಪುರದ ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಪೌಷ್ಟಿಕತೆ ಎನ್ನುವುದು ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ, ಪ್ರಸವಪೂರ್ವ ಮಗುವಿಗೂ ಅವಶ್ಯ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ತಲುಪಿಸಲಾಗುತ್ತದೆ. ಎಲ್ಲ ಇಲಾಖೆಗಳು ಕೈಜೋಡಿಸಿದಾಗ ಪೌಷ್ಟಿಕತೆ ಬೆಂಬಲಿಸುವ, ಆರೋಗ್ಯ ಪೋಷಿಸುವ ಕೆಲಸವಾಗುತ್ತದೆ ಎಂದರು.

    ಸಹಾಯಕ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಎಂ.ಪಿ.ದಿನೇಶ್ ಮಾತನಾಡಿ, ಅಪೌಷ್ಟಿಕತೆಯಿಂದಾಗಿ ಹಲವು ಅನಾರೋಗ್ಯದ ಸಮಸ್ಯೆಗಳು ಉದ್ಭವಿಸಿ, ವಯಸ್ಸು ಹಾಗೂ ಲಿಂಗ ಭೇದವಿಲ್ಲದೆ, ಎಲ್ಲರೂ ಸಂಕಷ್ಟಕ್ಕೆ ಒಳಗಾಗುತ್ತಾರೆ. ಗರ್ಭಿಣಿ ಪೌಷ್ಟಿಕ ಮಟ್ಟದ ಆಧಾರದ ಮೇಲೆ ಆಕೆಗೆ ಹುಟ್ಟುವ ಮಗುವಿನ ಆರೋಗ್ಯ ನಿರ್ಧಾರವಾಗುತ್ತದೆ. ರಕ್ತಹೀನತೆಯು ಗರ್ಭಿಣಿ, ಬಾಣಂತಿ ಸಾಮಾನ್ಯ ಸಮಸ್ಯೆಯಾಗಿದೆ. ಪ್ರತಿದಿನ ಸಮತೋಲನ ಆಹಾರ ಸೇವಿಸುವುದರಿಂದ ಮಾತ್ರ ಪರಿಣಾಮಕಾರಿಯಾಗಿ ರಕ್ತಹೀನತೆಯನ್ನು ತಡೆಗಟ್ಟಬಹುದು. ಎಲ್ಲರೂ ಪ್ರತಿ ದಿನ ಏಕದಳ, ದ್ವಿದಳ ಧಾನ್ಯಗಳು, ಹಸಿರು ಸೊಪ್ಪು, ತರಕಾರಿಗಳು ಹಾಗೂ ಹಣ್ಣು-ಹಂಪಲು ಸೇವಿಸುವುದರಿಂದ ಪೌಷ್ಟಿಕ ಮಟ್ಟ ಹೆಚ್ಚುತ್ತದೆ. ಜೀವ ಮತ್ತು ಜೀವನಕ್ಕೆ ಪೌಷ್ಟಿಕ ಆಹಾರ ಸೇವನೆ ಅತ್ಯವಶ್ಯಕ ಎಂದು ತಿಳಿಸಿದರು.
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಮಮತಾ, ಸಮತೋಲನ ಆಹಾರದ ಮಹತ್ವ, ಇಲಾಖೆ ಸೌಲಭ್ಯಗಳು, ಮಾತೃ ವಂದನಾ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆಯ ಮಹತ್ವ, ಸಮುದಾಯ ಆಧಾರಿತ ಚಟುವಟಿಕೆಗಳ ಬಗ್ಗೆ ಾಹಿತಿ ನೀಡಿದರು.

    ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎ.ಎಸ್.ಇಂದಿರಾ, ವಕೀಲರ ಸಂಘದ ಕಾರ್ಯದರ್ಶಿ ಸಿ.ಎಂ.ರಾಘವೇಂದ್ರ, ಆರೋಗ್ಯ ಇಲಾಖೆಯ ರಂಗರಾಜು, ಅಂಗನವಾಡಿ ಮೇಲ್ವಿಚಾರಕರು, ಆಶಾ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts