More

    ರಾಷ್ಟ್ರೀಯ ಭಗೀರಥ ಜಯಂತ್ಯುತ್ಸವ ಇಂದು

    ಚಿತ್ರದುರ್ಗ: ಹೊಸದುರ್ಗ ತಾಲೂಕಿನ ಬ್ರಹ್ಮವಿದ್ಯಾನಗರದ ಭಗೀರಥ ಗುರುಪೀಠದಲ್ಲಿ ಫೆ. 9, 10ರಂದು ಪುರುಷೋತ್ತಮಾನಂದ ಶ್ರೀ ಅವರ 25ನೇ ವರ್ಷದ ಪಟ್ಟಾಭಿಷೇಕದ ರಜತ ಮಹೋತ್ಸವ, ರಾಷ್ಟ್ರೀಯ ಭಗೀರಥ ಜಯಂತ್ಯುತ್ಸವ, ಉಪ್ಪಾರರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

    9ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಸಮಾವೇಶ ಉದ್ಘಾಟಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಮರಣ ಸಂಚಿಕೆ, ಸಚಿವ ಡಿ.ಸುಧಾಕರ್ ಕ್ಯಾಲೆಂಡರ್ ಬಿಡುಗಡೆಗೊಳಿಸುವರು. ಶಾಸಕ ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಚಿವ ಸತೀಶ್ ಜಾರಕಿಹೊಳಿ ಭಗೀರಥ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಎನ್.ಎಸ್.ಬೋಸರಾಜು, ಬಿ.ಜಿ.ಗೋವಿಂದಪ್ಪ ಸೇರಿ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ.

    ಸಾಲು ಮರದ ತಿಮ್ಮಕ್ಕ, ಬೆಂಗಳೂರು ರಾಜೀವ್‌ಗಾಂಧಿ ಆರೋಗ್ಯ ವಿವಿ ಮಾಜಿ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್, ಉದ್ಯಮಿ ಕುಂಸಿ ಚಂದ್ರಪ್ಪ, ನಿವೃತ್ತ ಅಧಿಕಾರಿ ವಿಜಯ್‌ಕುಮಾರ್ ತೋರ‌್ಗಲ್, ಸಿನಿಮಾ ನಿರ್ದೇಶಕ ಎಸ್.ವಿ.ರಾಜೇಂದ್ರಸಿಂಗ್‌ಬಾಬು, ಸೈಕ್ಲಿಂಗ್ ಕ್ರೀಡಾಪಟು ಸವಿತಾ ಮಹತೋ ಅವರಿಗೆ ಭಗೀರಥ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಉಪ್ಪಾರ ಸಮಾಜದ ಮಾಜಿ ಅಧ್ಯಕ್ಷ ಎನ್.ಮೂರ್ತಿ ತಿಳಿಸಿದ್ದಾರೆ.

    ಮಧ್ಯಾಹ್ನದ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸುವರು. ಬಿಹಾರದ ಮಾಜಿ ಉಪಮುಖ್ಯಮಂತ್ರಿ ರೇಣುದೇವಿ, ಕೇಂದ್ರ ಸಚಿವ ಕಪಿಲ್ ಮೋರೇಶ್ವರ ಪಾಟೀಲ್ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ತಾಲೂಕು ಅಧ್ಯಕ್ಷ ಸಿದ್ದೇಶ್ವರ್, ಉಪಾಧ್ಯಕ್ಷ ಎನ್.ಎಸ್.ರವಿ, ಮುಖಂಡರಾದ ಸಿ.ಎನ್.ಲವಕುಮಾರ್, ಮಲ್ಲೇಶ್, ಕೆ.ಟಿ.ಗುರುಸಿದ್ಧಪ್ಪ, ನಾಗಭೂಷಣ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts