More

    ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ಸಲ್ಲಿಸಿ

    ಬೆಳಗಾವಿ: ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಿ ಭವಿಷ್ಯದ ನಾಯಕರನ್ನಾಗಿ ರೂಪಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಶಿಕ್ಷಕರಿಗೆ ಅವಕಾಶವಿದೆ ಎಂದು ಪುದುಚೇರಿಯ ಜವಾಹರಲಾಲ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ರಾಕೇಶ ಅಗರ್ವಾಲ ಹೇಳಿದರು.

    ನಗರದ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿರುವ ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಆ್ಯಂಡ್ ರಿಸರ್ಚ್, ಡೀಮ್ಡ್ ವಿವಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ಬೆಳಗಾವಿಯ ಜೆ.ಎನ್. ವೈದ್ಯಕೀಯ ವಿವಿ ಶಿಕ್ಷಣ ವಿಭಾಗವು ವೈದ್ಯಕೀಯ ಶಿಕ್ಷಣ, ಅಧ್ಯಾಪಕರ ಅಭಿವೃದ್ಧಿ ಇತ್ಯಾದಿಗಳಲ್ಲಿ ವೈದ್ಯಕೀಯ ಅಧ್ಯಾಪಕರಿಗೆ ತರಬೇತಿ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿಕೊಂಡು ಬರುತ್ತಿದೆ. ಉತ್ತರ ಕರ್ನಾಟಕದ ಭಾಗದಲ್ಲಿ ಶಿಕ್ಷಣ ಒದಗಿಸುವ ಉದ್ದೇಶದಿಂದ 1916ರಲ್ಲಿ ಆರಂಭಗೊಂಡ ಕೆಎಲ್‌ಇ ಶಿಕ್ಷಣ ಸಂಸ್ಥೆಯು ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ತಿಳಿಸಿದರು.

    ವಿವಿ ಕುಲಪತಿ ಡಾ. ವಿವೇಕ ಸಾವಜಿ ಮಾತನಾಡಿ, ನಿರ್ದಿಷ್ಟ ದಿನದಂದು ಶಿಕ್ಷಕರ ದಿನವನ್ನು ಆಚರಿಸುವ ವಿಶ್ವದ ಏಕೈಕ ದೇಶ ಭಾರತವಾಗಿದೆ ಎಂದರು.

    ಜೆಎನ್‌ಎಂಸಿ ಪ್ರಸೂತಿ ಮತ್ತು ಸ್ತ್ರೀರೋಗದ ವಿಭಾಗದ ಪ್ರಾಧ್ಯಾಪಕ ಡಾ.ಎಂ.ಬಿ. ಬೆಲ್ಲದ, ಉಪ ಕುಲಸಚಿವ ಡಾ.ಎಂ.ಎಸ್.ಗಣಾಚಾರಿ, ಪ್ರಾಚಾರ್ಯ ಡಾ.ಎನ್.ಎಸ್.ಮಹಾಂತಶೆಟ್ಟಿ, ಕುಲಸಚಿವ ಡಾ.ವಿ.ಎ.ಕೋಠಿವಾಲೆ, ಡಾ.ಜ್ಯೋತಿ ಎಂ.ನಾಗಮೋತಿ, ಡಾ.ಅವಿನಾಶ ಕವಿ, ಡಾ. ಸುನಿತಾ ಪಾಟೀಲ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts