More

    ರಿಯಾಯಿತಿ ದರದಲ್ಲಿ ಆರೋಗ್ಯ ಸೇವೆ

    ಹೊನ್ನಾವರ: ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ‘ಆರೋಗ್ಯ ಕಾರ್ಡ್’ ಪ್ರಾರಂಭಿಸಲಾಗಿದೆ ಎಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.

    ಪಟ್ಟಣದಲ್ಲಿ ಶುಕ್ರವಾರ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಿಸಿ ಅವರು ಮಾತನಾಡಿದರು. ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಲು ಸಾಧ್ಯವಾಗದಿದ್ದರೂ ಎಲ್ಲರಿಗೂ ರಿಯಾಯಿತಿ ದರದಲ್ಲಿ ಲಭ್ಯವಾಗಬೇಕು ಎಂಬುದು ಇದರ ಉದ್ದೇಶವಾಗಿದೆ ಎಂದರು. ಕಾರ್ಡ್ ಹೊಂದಿರುವವರು ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇ.50ರಷ್ಟು, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ. 30, ಸಿಟಿಎಂಆರ್‌ಐ, ಅಲ್ಟ್ರಾಸೌಂಡ್‌ಗಳಲ್ಲಿ ಶೇ. 20ರಷ್ಟು ರಿಯಾಯಿತಿ ಪಡೆಯಬಹುದು ಎಂದರು. ಮಣಿಪಾಲ ಆರೋಗ್ಯ ಕಾರ್ಡ್‌ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಸಾರ್ವಜನಿಕರು ಮಣಿಪಾಲ್ ಆರೋಗ್ಯ ಕಾರ್ಡ್‌ನ್ನು ಎಲ್ಲ ಅಧಿಕತ ಪ್ರತಿನಿಧಿಗಳಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು. ಮಾರುಕಟ್ಟೆ ವಿಭಾಗದ ಪ್ರತಿನಿಧಿ ಚೇತನ್ ಹಾಗೂ ಜಿ.ಯು. ಭಟ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts