More

    ರೇಖಾ ಅನಿಲ್ ಚನ್ನರಾಯಪಟ್ಟಣ ಪುರಸಭೆ ಅಧ್ಯಕ್ಷೆ

    ಚನ್ನರಾಯಪಟ್ಟಣ: ಪುರಸಭೆ ಅಧ್ಯಕ್ಷೆಯಾಗಿ ರೇಖಾ ಅನಿಲ್ ಅವಿರೋಧವಾಗಿ ಆಯ್ಕೆಯಾದರು.

    ನಿಕಟಪೂರ್ವ ಅಧ್ಯಕ್ಷೆ ರಾಧಾ ಮಂಜುನಾಥ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ರೇಖಾ ಅನಿಲ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ತಹಸೀಲ್ದಾರ್ ಬಿ.ಎಂ.ಗೋವಿಂದರಾಜು ಅವಿರೋಧ ಆಯ್ಕೆ ಪ್ರಕಟಿಸಿದರು.

    ನೂತನ ಅಧ್ಯಕ್ಷೆಯನ್ನು ಅಭಿನಂದಿಸಿ ಮಾತನಾಡಿದ ಶಾಸಕ ಸಿ.ಎನ್.ಬಾಲಕೃಷ್ಣ, ಹಿಂದಿನ ಎಲ್ಲ ಅಧ್ಯಕ್ಷರು ತಮ್ಮ ತಮ್ಮ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಹಾಸನ ಬಿಟ್ಟರೆ ಎರಡನೇ ಅತಿ ದೊಡ್ಡ ನಗರವಾಗಿ ಪಟ್ಟಣ ಬೆಳೆಯುತ್ತಿದ್ದು, ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ನಾಗರಿಕರ ಹಿತದೃಷ್ಟಿಯಿಂದ ಮತ್ತು ಪಟ್ಟಣದ ಸಮಗ್ರ ಅಭಿವೃದ್ಧಿ ವಿಷಯದಲ್ಲಿ ಒಗ್ಗಟ್ಟಾಗಿ ಹೋಗಬೇಕು ಎಂದರು.

    ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ನೂತನ ಅಧ್ಯಕ್ಷೆಯನ್ನು ಅಭಿನಂದಿಸಿ ಮಾತನಾಡಿ, ಪಟ್ಟಣದ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
    ನೂತನ ಅಧ್ಯಕ್ಷೆ ರೇಖಾ ಅನಿಲ್ ಮಾತನಾಡಿ, ನಾನು ಅಧ್ಯಕ್ಷೆಯಾಗಿ ಆಯ್ಕೆಯಾಗಲು ಸಹಕರಿಸಿದ ಶಾಸಕ ಸಿ.ಎನ್.ಬಾಲಕೃಷ್ಣ ಹಾಗೂ ಎಲ್ಲ ಸದಸ್ಯರಿಗೂ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಪಟ್ಟಣದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು. ಶುದ್ಧ ಕುಡಿಯುವ ನೀರು, ಸ್ವಚ್ಛತೆ, ಚರಂಡಿ ವ್ಯವಸ್ಥೆ, ವಿದುತ್ಯ, ಉದ್ಯಾನ ನಿರ್ವಹಣೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದರು.

    ಪುರಸಭಾ ಮುಖ್ಯಧಿಕಾರಿ ಕೆ.ಎನ್.ಹೇಮಂತ್, ಉಪಾಧ್ಯಕ್ಷೆ ಲಕ್ಷ್ಮೀ ವೆಂಕಟೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಬನಶಂಕರಿ ರಘು, ಸದಸ್ಯರಾದ ಫರ್ಹನರಿಜ್, ಕವಿತಾ, ರಾಣಿಕೃಷ್ಣ, ರೇಖಾ ಅನಿಲ್, ಗಣೇಶ್, ನವೀನ್, ಶಶಿಧರ್, ಮೋಹನ್ ಕುಮಾರ್, ಯೋಗೇಶ್, ಇಲಿಯಾಸ್, ಜಿ.ಆರ್ ಸುರೇಶ್, ಧರಣೇಶ್, ಜಿ.ಆರ್. ಸುರೇಶ್, ಅನಿಲ್ ಮರಗೂರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts