More

    ರೇಷ್ಮೆ ಬೆಂಬಲ ಬೆಲೆ ನಿಗದಿಗೆ ಆಗ್ರಹ, ರೈತಸಂಘ-ಹಸಿರುಸೇನೆ ಪದಾಧಿಕಾರಿಗಳ ಮನವಿ

    ಶಿಡ್ಲಘಟ್ಟ: ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೇಷ್ಮೆ ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿ ನಗರದ ರೇಷ್ಮೆಗೂಡು ಮಾರುಕಟ್ಟೆ ಉಪನಿರ್ದೇಶಕರ ಮೂಲಕ ರೇಷ್ಮೆ ಸಚಿವ ಆರ್.ಶಂಕರ್ ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ) ಪದಾಧಿಕಾರಿಗಳು ಗುರುವಾರ ಮನವಿ ಸಲ್ಲಿಸಿದರು.

    ಏಷ್ಯಾದಲ್ಲೇ ಪ್ರಸಿದ್ಧವಾಗಿರುವ ಇಲ್ಲಿನ ರೇಷ್ಮೆ ಮಾರುಕಟ್ಟೆಯಲ್ಲಿ ಈ ಹಿಂದೆ ಒಂದು ಕೆ.ಜಿ. 400ರಿಂದ 500 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಈಗ 200-250ಕ್ಕೆ ಮಾರಾಟವಾಗುತ್ತಿದೆ. ಆದರೆ ಒಂದು ಕೆಜಿ ರೇಷ್ಮೆಗೂಡು ಬೆಳೆಯಲು ವೈಜ್ಞಾನಿಕವಾಗಿ ಕೆಜಿಗೆ ಸುಮಾರು 450 ರೂ. ಖರ್ಚಾಗುತ್ತಿದ್ದು ರೈತರಿಗೆ ಭಾರೀ ನಷ್ಟವುಂಟಾಗುತ್ತಿದೆ. ಹಾಗಾಗಿ ಸರ್ಕಾರ ಕೂಡಲೇ ಕೆಜಿಗೆ 450 ರೂ. ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿ ಈಗಾಗಿರುವ ನಷ್ಟವನ್ನು ಸಹಾಯಧನದ ರೂಪದಲ್ಲಿ ರೈತರ ಖಾತೆಗೆ ಜಮೆ ಮಾಡುವಂತೆ ಪದಾಧಿಕಾರಿಗಳು ಒತ್ತಾಯಿಸಿದರು.

    ತಾಲೂಕಿನಲ್ಲೇ ರೇಷ್ಮೆಸೀರೆ, ಮಗ್ಗಗಳ ಕಾರ್ಖಾನೆಗಳನ್ನು ಆರಂಭಿಸಿದರೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿದಂತಾಗುತ್ತದೆ. ಕೂಡಲೇ ಸ್ಥಳೀಯ ಮಾರುಕಟ್ಟೆಯಲ್ಲಿ ಪರಿಶೀಲನೆ ನಡೆಸುವ ಜತೆಗೆ ರೇಷ್ಮೆ ಬೆಳೆಗಾರರು ಹಾಗೂ ನೂಲು ಬಿಚ್ಚಾಣಿಕೆದಾರರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.

    ಜಿಲ್ಲಾ ರೈತಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ)ಅಧ್ಯಕ್ಷ ಬೆಳ್ಳೂಟಿ ಬಿ.ಕೆ.ಮುನಿಕೆಂಪಣ್ಣ, ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಡಿ.ವಿ.ನಾರಾಯಣಸ್ವಾಮಿ, ಮುರಳಿ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts