More

    ರೈತರಿಂದ ದೂರ ಬರದಂತೆ ಕ್ರಮ ವಹಿಸಿ

    ಯಾದಗಿರಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತಾಪಿ ವರ್ಗ ಸಂಕಷ್ಟದಲ್ಲಿದ್ದು, ಅಧಿಕಾರಿಗಳು ಅವರ ಸಮಸ್ಯೆ ಆಲಿಸಿ, ಪರಿಹಾರ ಒದಗಿಸಲು ಮುಂದಾಗಬೇಕು ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಖಡಕ್ ಸೂಚನೆ ನೀಡಿದರು.
    ತಾಲೂಕಿನ ಹತ್ತಿಕುಣಿ ಗ್ರಾಮದಲ್ಲಿನ ಜಲಾಶಯಕ್ಕೆ ಬಾಗಿನ ಅಪರ್ಿಸಿದ ನಂತರ ನಡೆದ ನೀರಾವರಿ ಸಲಹಾ ಸಮಿತಿ ಸಭೆ ಉದ್ಘಾಟಿಸಿ ಮಾತನಾಡಿ, ಕಾಲುವೆ ಕೊನೆ ಭಾಗದ ರೈತರಿಗೆ ನೀರು ತಲುಪಿಸುವ ಕೆಲಸ ಮಾಡುವುದು ಅವಶ್ಯವಿದೆ. ಕೆಲವೆಡೆ ಕಾಲುವೆಗಳು ಒಡೆದು ಹಾಳಾಗಿವೆ. ಇನ್ನೂ ಕೆಲ ಭಾಗದಲ್ಲಿ ಹೂಳು ತುಂಬಿದ ಕಾರಣ ನೀರು ಸರಾಗವಾಗಿ ಹರಿಯುತ್ತಿಲ್ಲ ಎಂದರು.

    ಜಲಾಶಯಗಳ ಮುಖ್ಯ ಕಾಲುವೆಗಳ ಅಗತ್ಯ ಕಾಮಗಾರಿ ಕೈಗೊಳ್ಳಲು ಶಾಸಕರ ಅನುದಾನದಲ್ಲಿ 50 ಲಕ್ಷ ರೂ. ನೀಡಲಾಗುವುದು. ಅಧಿಕಾರಿಗಳು 2 ದಿನಗಳಲ್ಲಿ ಎಲ್ಲ ಕಾಲುವೆಗಳಿಗೆ ಭೇಟಿ ನೀಡಿ, ಸಮಸ್ಯೆ ಅರಿತುಕೊಂಡು ಸಮಗ್ರ ವರದಿ ಸಿದ್ಧಪಡಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ತೊಂದರೆಯಾಗಬಾರದು, ಅವರ ನಿರೀಕ್ಷೆಯಂತೆ ನಾವು, ನೀವು ಕೆಲಸ ಮಾಡಬೇಕಾಗಿದೆ. ಈ ಹಿಂದೆ ನಮ್ಮ ತಂದೆ ಶಾಸಕರಾಗಿದ್ದಾಗ ಸೈದಾಪುರ ವಲಯದ 22 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಜೂರಾತಿ ದೊರಕಿಸಿಕೊಡಲಾಗಿದೆ. ಅದರಂತೆ ಇಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೊದ್ಯಮ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಹತ್ತಿಕುಣಿ ಮತ್ತು ಸೌದಾಗರ ಜಲಾಶಯಗಳ ನೀರನ್ನೇ ಅವಲಂಬಿಸಿ ಹತ್ತಾರು ಗ್ರಾಮಗಳ ರೈತರು ಕೃಷಿ ಚಟುವಟಿಕೆ ಕೈಗೊಳ್ಳುತ್ತಾರೆ, ಆದರೆ ಸಕರ್ಾರದಿಂದ ಸೂಕ್ತ ಅನುದಾನ ಸಿಗುತ್ತಿಲ್ಲ. ಅಲ್ಲದೆ ಸಿಬ್ಬಂದಿ ಕೊರತೆ ಇದೆ. ಇಲ್ಲಿ ರೈತರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ನಾನು ಅಧಿಕಾರಿಗಳಿಂದ ತಿಳಿದಿದ್ದೇನೆ, ಈಗಾಗಲೇ ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ,ಕೆ ಶಿವಕುಮಾರ ಅವರನ್ನು ಭೇಟಿಯಾಗಿ ಸಮಸ್ಯೆಗಳನ್ನು ವಿವರಿಸಿ, ಅನುದಾನ ಬಿಡುಗಡೆ ಮಾಡಲು ಮನವಿ ಮಾಡಿದ್ದೇನೆ, ಅದಕ್ಕೆ ಅವರು ಕೂಡ ಸಕರಾತ್ಮಕವಾಗಿ ಸ್ಪಂದಿಸಿ ಭರವಸೆ ನೀಡಿ, 2 ತಿಂಗಳ ನಂತರ ನಿಮ್ಮ ಸಮಸ್ಯೆಗೆ ಪರಿಹಾರ ದೊರಕಿಸಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts