More

    ರೈತರಿಂದ 26ಕ್ಕೆ ವಿಧಾನಸೌಧ ಚಲೋ, ಕಬ್ಬಿನ ಎಫ್ ಆರ್ ಪಿ ಮರು ಪರಿಶೀಲನೆಗೆ ಆಗ್ರಹ

    ದಾವಣಗೆರೆ: ಕಬ್ಬಿನ ಎಫ್ ಆರ್ ಪಿ ಮರು ಪರಿಶೀಲನೆ ಮಾಡಬೇಕು, ವಿದ್ಯುತ್ ಕಾಯ್ದೆ ಖಾಸಗೀಕರಣ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ೨೬ರಂದು ಬೆಂಗಳೂರು ವಿಧಾನಸೌಧ ಚಲೋ ನಡೆಸಲಿದ್ದಾರೆ.

    ಕೇಂದ್ರ ಸರ್ಕಾರ ಸಕ್ಕರೆ ಇಳುವರಿಯನ್ನು ಹೆಚ್ಚಿಸಿ ಪ್ರಸಕ್ತ ಸಾಲಿನ ಕಬ್ಬಿನ ಎಫ್‌ಆರ್‌ಪಿ ಅನ್ನು ೩೦೫೦ ರೂ. ನಿಗದಿಪಡಿಸಿರುವುದು ರೈತರಿಗೆ ಕಹಿಸುದ್ದಿಯಾಗಿದೆ. ರಾಜ್ಯದಲ್ಲಿ ಸುಮಾರು ೪೦ ಲಕ್ಷ ರೈತರ ಕೃಷಿ ಪಂಪ್‌ಸೆಟ್‌ಗಳಿದ್ದು, ೨೦೨೨ರ ವಿದ್ಯುತ್ ಕಾಯ್ದೆ ಖಾಸಗಿಕರಣಗೊಳಿಸಿ ಹಣ ವಸೂಲಿಗೆ ಹೊರಟಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತ್‌ಕುಮಾರ್ ಸುದ್ದಿಗೋಷ್ಠಿಯಲ್ಲಿ ದೂರಿದರು.
    ದೇಶಾದ್ಯಂತ ರೈತ ಚಳವಳಿಯನ್ನು ಮತ್ತಷ್ಟು ಪ್ರಬಲಗೊಳಿಸಲು ಬೆಂಗಳೂರಿನ ಗಾಂಧಿ ಭವನದಲ್ಲಿ ಸೆ.೨೫ ರಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರೀಯ ರೈತ ಮುಖಂಡರ ಕಿಸಾನ್ ಅಧಿವೇಶನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು
    ಮೂರು ಕೃಷಿ ಕಾಯ್ದೆಗಳನ್ನು ರದ್ದುಮಾಡಿ ಎಂಎಸ್‌ಪಿ ಖಾತ್ರಿ ಕಾನೂನು ಜಾರಿ ಮಾಡುವುದಾಗಿಯೂ, ದೆಹಲಿ ಹೋರಾಟದಲ್ಲಿ ಮಡಿದ ೭೫೦ ರೈತ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಹೇಳಿದ್ದ ಪ್ರಧಾನಿ ಮೋದಿ ಹುಸಿಗೊಳಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಮಾಡಲು ಸಮಿತಿ ರಚಿಸಿದ್ದೇವೆ ಎನ್ನುತ್ತಲೇ ವರ್ಷಗಳ ಕಾಲ ಹೋರಾಟ ಮಾಡಿದ ರೈತ ಮುಖಂಡರನ್ನು ಹೊರಗಿಟ್ಟು ಸಮಿತಿ ರಚಿಸಿರುವ ಹಿನ್ನೆಲೆಯಲ್ಲಿ ರೈತ ಚಳವಳಿಯನ್ನು ಪ್ರಬಲಗೊಳಿಸಲು ನಿರ್ಧರಿಸಲಾಗಿದೆ ಎಂದರು.
    ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಕಾನೂನು ಜಾರಿಗೆ ತಂದು ಡಾ. ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು, ಕೃಷಿ ಉತ್ಪನ್ನಗಳು ಹಾಗೂ ಉಪಕರಣಗಳ ಮೇಲಿನ ಜಿಎಸ್‌ಟಿ ರದ್ದುಪಡಿಸಬೇಕು, ದೇಶದ ಉದ್ಯಮಿಗಳ ೧೦ ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ರೀತಿಯಲ್ಲಿ, ರೈತರ ಸಾಲ ಮನ್ನಾ ಮಾಡಬೇಕು, ಫಸಲ್ ಭೀಮಾ ಬೆಳೆವಿಮೆ ಯೋಜನೆ ಮಾನದಂಡ ಬದಲಾಯಿಸಬೇಕು ಎಂದು ಆಗ್ರಹಿಸಿದರು.
    ರಾಜ್ಯದಲ್ಲಿ ಸುಮಾರು ೧೦ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಳೆ ಹಾನಿಯಿಂದ ರೈತರ ಬೆಳೆ ನಷ್ಟ ಆಗಿದೆ. ಕೇಂದ್ರ ತಂಡ ನಾಮಕಾವಸ್ತೆ ಪರಿಶೀಲನೆ ನಡೆಸಿದ್ದು, ರೈತರ ಜಮೀನುಗಳ ನಷ್ಟ ಅಂದಾಜು ಮಾಡಲು ವಿಫಲರಾಗಿದ್ದಾರೆ, ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಮಂತ್ರಿಗಳು ಅಧಿಕಾರಿಗಳು ಕಾಣೆಯಾಗಿದ್ದಾರೆ ಎಂದು ದೂರಿದರು. ಸಂಕಷ್ಟದಲ್ಲಿರುವ ರೈತರ ಸಾಲ ವಸೂಲಾತಿ ನಿಲ್ಲಿಸಿ ಆರ್‌ಬಿಐ ನಿಯಮದಂತೆ ಇರುವ ಸಾಲದ ಮೇಲೆ ಶೇಕಡಾ ೨೫ರಷ್ಟು ಹೆಚ್ಚುವರಿ ಸಾಲ ನೀಡಬೇಕು, ರಾಜ್ಯದಲ್ಲಿ ಜಾರಿ ಮಾಡಿರುವ ಎಪಿಎಂಸಿ ಕಾಯ್ದೆಯನ್ನು ವಾಪಸ್ ಪಡೆಯಬೇಕು ನೆಂದು ಆಗ್ರಹಿಸಿದರು.
    ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್, ರಾಜ್ಯರೈತ ಸಂಘದ ಮುಖಂಡ ರವಿಕುಮಾರ್, ಹನುಮೇಗೌಡ, ಸಿ ಬಿ ಶಂಕರ್ ಪ್ರಸಾದ್, ಕುಮಾರಸ್ವಾಮಿ, ಅಂಜನಪ್ಪ, ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts