More

    ರೈತರಿಗೆ ಅನುಕೂಲವಾಗುವಂತೆ ಯೋಜನೆ ರೂಪಿಸಿ

    ಸೂಲಿಬೆಲೆ: ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಎಪಿಎಂಸಿ ನಿರ್ಮಾಣಕ್ಕೆ ಖರೀದಿಸಿರುವ ಜಮೀನಿನ ಸುತ್ತಲೂ ತಂತಿ ಬೇಲಿ ಅಳವಡಿಸುವ ಮೂಲಕ ರಕ್ಷಿಸಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಸೂಚಿಸಿದರು.

    ಗೊಣಕನಹಳ್ಳಿ ಗ್ರಾಮಕ್ಕೆ ಸೋಮವಾರ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ ಅವರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾತನಾಡಿದರು.

    ರೈತರಿಗೆ ಅನುಕೂಲವಾಗುವಂತೆ ರೈತರಿಗೆ ಅನುಕೂಲವಾಗುವಂತೆ ಶೈತ್ಯಾಗಾರ, ಕೃಷಿ ಉತ್ಪನ್ನಗಳ ದಾಸ್ತಾನಿಗೆ ಉಗ್ರಾಣ ನಿರ್ಮಾಣಕ್ಕೆ ಬಳಸಿಕೊಳ್ಳಬಹುದಾಗಿದೆ. ಈ ಬಗ್ಗೆ ಕ್ರಿಯಾಯೋಜನೆ ಸಿದ್ಧ ಪಡಿಸಿ ಸಲ್ಲಿಸಿದರೆ ಸರ್ಕಾರದಿಂದಲೂ ಸೂಕ್ತ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ದೇಶಕ ಕರೀಗೌಡ, ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಕೆ.ಎಂ. ವಸುಂಧರಾ, ತಹಸೀಲ್ದಾರ್ ವಿ. ಗೀತಾ, ಜಡಿಗೇನಹಳ್ಳಿ ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಎಸ್.ಸುರೇಶ್, ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷೆ ಕಾಂತಮ್ಮ, ಸದಸ್ಯರಾದ ಡಿ.ಟಿ.ವೆಂಕಟೇಶ್, ಜೆ.ವಿ.ರವಿಶಂಕರ್, ಪರಮೇಶ್, ಕೆ.ಮುನಿರಾಜು, ಎಚ್.ಕೆ.ದೇವರಾಜ್, ಕಾರ್ಯದರ್ಶಿ ರೂಪಾ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts