More

    ರೈತರಿಗೆ ಅನ್ಯಾಯವಾಗದಂತೆ ಕೆಲಸ ಮಾಡಿ

    ಸೇಡಂ (ಕಲಬುರಗಿ): ಎಲ್ಲೆಡೆ ರೈತರು ಮುಂಗಾರು ಬೆಳೆ ಬಿತ್ತನೆ ಕಾರ್ಯ ಪೂರ್ಣಗೊಳಿಸಿದ್ದು, ಕಳೆದ ಕೆಲ ದಿನಗಳ ಹಿಂದೆ ಸತತವಾಗಿ ಸುರಿದ ಮಳೆಗೆ ಬೆಳೆಗಳು ಹಾನಿಗೊಳಗಾಗಿವೆ. ಆದ್ದರಿಂದ ವಿಮೆ ಪಾವತಿಸಿದ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಸಿಬ್ಬಂದಿ ಸರ್ವೇ ಕಾರ್ಯ ತ್ವರಿತವಾಗಿ ನಡೆಸಬೇಕೆಂದು ತಹಸೀಲ್ದಾರ್ ಬಸವರಾಜ ಬೆಣ್ಣೆಶಿರೂರ ಹೇಳಿದರು.

    ತಾಪಂ ಸಭಾಂಗಣದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾ ಇಲಾಖೆಯು ಕಂದಾಯ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸಿಬ್ಬಂದಿಗೆ ಮಂಗಳವಾರ ಆಯೋಜಿಸಿದ್ದ ಕನರ್ಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಬೆಳೆ ಕಟಾವು ಪ್ರಯೋಗಗಳ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಳೆದ ವರ್ಷ ಸಿಬ್ಬಂದಿ ತಪ್ಪಿನಿಂದ ಕೆಲ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗಲಿಲ್ಲ. ಅಂತಹ ಘಟನೆ ಮರುಕಳಿಸಬಾರದು ಎನ್ನುವ ಕಾರಣಕ್ಕೆ ಕಾಲ ಕಾಲಕ್ಕೆ ಇಲಾಖೆಯಿಂದ ಸರ್ವೇ ನಡೆಸುವ ವಿಧಾನದ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಸರ್ಕಾರ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವ ಮನೋಭಾವ ಪ್ರತಿಯೊಬ್ಬ ನೌಕರ ಬೆಳೆಸಿಕೊಂಡರೆ ಸರ್ಕಾರದ ಯೋಜನೆಗಳು ಪ್ರತಿ ಮನೆಗೆ ತಲುಪಿಸಲು ಸಾಧ್ಯ. ಕೆಲಸಕ್ಕೆ ಅಸಡ್ಡೆ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

    ಸಂಖ್ಯಾ ಸಂಗ್ರಹಣಾ ಇಲಾಖೆಯ ಸಹಾಯಕ ನಿರ್ದೇಶಕ ದಾದಾಗೌಡ ಬಿರಾದಾರ, ಶಿವಶರಣಪ್ಪ ಧನ್ನಿ, ತಾಪಂ ಯೋಜನಾಧಿಕಾರಿ ರವಿಕುಮಾರ, ಕೃಷಿ ಇಲಾಖೆ ಸಹಾಯಕ ಕೃಷಿ ಅಧಿಕಾರಿ ಪ್ರಕಾಶ ರಾಠೋಡ್, ಬಸವರಾಜ ಕೊಡಸಾ, ಉಪತಹಸೀಲ್ದಾರ್ ಅಣವೀರಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts