More

    ರೈತರು-ಕಾರ್ಯದರ್ಶಿಗಳು ಬಮುಲ್‌ಗೆ ಬೆನ್ನೆಲುಬು, ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ ಅಭಿಮತ, ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ

    ದೊಡ್ಡಬಳ್ಳಾಪುರ: ರೈತರು, ಸಹಕಾರಿ ಸಂಘದ ಕಾರ್ಯದರ್ಶಿಗಳು ಬಮುಲ್‌ಗೆ ಎರಡು ಕಣ್ಣುಗಳಿದ್ದಂತೆ. ಈ ಇಬ್ಬರ ಸಹಕಾರದಿಂದ ಬಮುಲ್, ಕೆಎಂಎಫ್ ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ ಎಂದು ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ ತಿಳಿಸಿದರು.

    ನಗರದ ಬಮುಲ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎಂಪಿಸಿಎಸ್ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.

    ತಾಲೂಕಿನಲ್ಲಿ ಎಲ್ಲ ನೌಕರರು ಹೆಚ್ಚಿನ ಶ್ರಮವಹಿಸಿ, ಸದಾ ಕಾರ್ಯಚಟುವಟಿಕೆ ಹಮ್ಮಿಕೊಂಡು ಕ್ರಿಯಾಶೀಲರಾಗಿದ್ದಾರೆ. ನೌಕರರ ಕ್ಷೇಮಾಭಿವೃದ್ಧಿಗಾಗಿ ಸಂಘ ರಚಿಸಿಕೊಂಡು ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದ್ದಾರೆ ಎಂದರು.

    ಬಮುಲ್‌ನಲ್ಲಿ ಎಲ್ಲ ಉತ್ಪನ್ನಗಳಲ್ಲಿ ಗುಣಮಟ್ಟ ಕಾಪಾಡಿಕೊಳ್ಳಾಗುತ್ತಿದೆ. ಕೋವಿಡ್ ಸಂಕಷ್ಟದಲ್ಲಿಯೂ ಕಾರ್ಯನಿರ್ವಾಹಕ ಅಧಿಕಾರಿಗಳು ಎಂದಿನಂತೆ ಕೆಲಸ ಮಾಡಿದ್ದಾರೆ ಎಂದ ಅವರು, ಗ್ರಾಹಕರಿಗೆ ಮಾರುವ ಹಾಲಿನ ಬೆಲೆಯನ್ನು ಹೆಚ್ಚಿಸುವ ಕುರಿತು ಸರ್ಕಾರಕ್ಕೆ ವರದಿ ನೀಡಿದ್ದೇವೆ. ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದರಿಂದಾಗಿ ರೈತರಿಗೆ ನೀಡುವ ದರ ಕೂಡ ಏರಿಕೆಯಾಗಿಲ್ಲ ಎಂದರು.
    ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ರೈತರ ಮಕ್ಕಳು ಪ್ರತಿಭಾವಂತರಾಗಬೇಕು. ಸಿಕ್ಕ ಅವಕಾಶ ಸದುಪಯೋಗ ಪಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದು ತಿಳಿಸಿದರು.

    ತಾಲೂಕಿಗೆ ಬಮುಲ್ ಹಾಗೂ ಕೆಎಂಎಫ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ತರಲಾಗುತ್ತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ರೈತರು ಸಹಕಾರ ಅಗತ್ಯ ಎಂದರು.

    ನೌಕರರ ಕ್ಷೇಮಾಭಿವೃದ್ಧಿ ಸಂಘಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಬಮುಲ್‌ನಿಂದ 10 ಲಕ್ಷ ರೂ. ಹಾಗೂ ವೈಯಕ್ತಿಕವಾಗಿ 10 ಲಕ್ಷ ರೂ.ಗಳನ್ನು ಸಂಘಕ್ಕೆ ಜಮೆ ಮಾಡಿ ನೌಕರರ ಕ್ಷೇಮಕ್ಕೆ ಶ್ರಮಿಸಲಾಗುವುದು ಎಂದರು.

    ಟಿಎಪಿಎಂಸಿಎಸ್ ಅಧ್ಯಕ್ಷ ಅಂಜನಗೌಡ, ಮುಖಂಡ ಅಪ್ಪಕಾರನಹಳ್ಳಿ ರಾಮಣ್ಣ, ಮಾಜಿ ಅಧ್ಯಕ್ಷ ಡಿ.ಸಿದ್ದರಾಮಯ್ಯ ಇತರರು ಇದ್ದರು.

    15ಡಿಬಿಪಿ1
    ದೊಡ್ಡಬಳ್ಳಾಪುರ ಬಮುಲ್‌ನಿಂದ ಮಂಗಳವಾರ ನೌಕರರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಬಮುಲ್ ಅಧ್ಯಕ್ಷ ನರಸಿಂಹಮೂರ್ತಿ, ಕೆಎಂಎಫ್ ನಿರ್ದೇಶಕ ಬಿಸಿ ಆನಂದ್ ಕುಮಾರ್, ರಾಜ್ಯ ತೆಂಗು ಮತ್ತು ನಾರು ಮಂಡಳಿ ಅಧ್ಯಕ್ಷ ಎಸ್.ಎಲ್.ವೆಂಕಟೇಶ್‌ಬಾಬು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts