More

    ರೈತರೊಂದಿಗೆ ಅರಣ್ಯಾಧಿಕಾರಿಗಳ ಸಮಾಲೋಚನೆ

    ಗುಂಡ್ಲುಪೇಟೆ: ತಾಲೂಕಿನ ಕಂದೇಗಾಲ ಗ್ರಾಮಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಹುಲಿ ದಾಳಿಯಿಂದ ಜಾನುವಾರು ಕಳೆದುಕೊಂಡ ರೈತರೊಂದಿಗೆ ಸಮಾಲೋಚನೆ ನಡೆಸಿದರು.

    ನಾಲ್ಕು ದಿನಗಳ ಹಿಂದೆ ತಾಲೂಕಿನ ಸ್ಕಂದಗಿರಿ ಪಾರ್ವತಾಂಭಾ ಬೆಟ್ಟದಲ್ಲಿ ಹುಲಿ ದಾಳಿ ನಡೆಸಿ ಮಂಜಪ್ಪ ಅವರಿಗೆ ಸೇರಿದ ಮೂರು ಜಾನುವಾರುಗಳನ್ನು ಕೊಂದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಎಸ್‌ಟಿಪಿಎಫ್ ಸಿಬ್ಬಂದಿ ಹುಲಿಯನ್ನು ಕಾಡಿಗಟ್ಟಲು ಪಟಾಕಿ ಸಿಡಿಸಿ ಇಡೀ ಪ್ರದೇಶದಲ್ಲಿ ಕೂಂಬಿಂಗ್ ನಡೆಸಿದರು.


    ಬಫರ್ ವಲಯದ ಆರ್‌ಎಫ್‌ಒ ಎನ್.ಪಿ. ನವೀನ್‌ಕುಮಾರ್, ಡಿಆರ್‌ಎಫ್‌ಒ ಮುದ್ದುರಾಜ್ ಗ್ರಾಮಕ್ಕೆ ತೆರಳಿ ಸಂತ್ರಸ್ತರು ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಜಾನುವಾರುಗಳೊಂದಿಗೆ ಜಮೀನುಗಳಿಗೆ ಹೋಗಲಾಗುತ್ತಿಲ್ಲ. ಕೂಲಿ ಕೆಲಸಕ್ಕೆ ಕಾರ್ಮಿಕರೂ ಬರುತ್ತಿಲ್ಲ. ಆದ್ದರಿಂದ ಕೂಡಲೇ ಹುಲಿಯನ್ನು ಸೆರೆಹಿಡಿಯಲು ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.


    ಸರ್ಕಾರದ ಅನುಮತಿ ಪಡೆದು ನಂತರ ಹುಲಿ ಸೆರೆಹಿಡಿಯಲು ಕಾರ್ಯಾಚರಣೆ ನಡೆಸಲಾಗುವುದು. ಅಲ್ಲಿಯವರೆಗೆ ಹುಲಿಯನ್ನು ಬೇರೆಡೆ ಅಟ್ಟಲು ಕೂಂಬಿಂಗ್ ನಡೆಸಲಾಗುತ್ತಿದೆ. ಶೀಘ್ರವೇ ಜಾನುವಾರು ನಷ್ಟಕ್ಕೆ ಪರಿಹಾರ ಕೊಡಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts