More

    ರೈತರ ಋಣ ತೀರಿಸದ ಜೆಡಿಎಸ್ ಶಾಸಕರು

    ಪಾಂಡವಪುರ: ರೈತರ ಹೆಸರೇಳಿಕೊಂಡು ಚುನಾಯಿತರಾದ ಜೆಡಿಎಸ್ ಶಾಸಕರು ಜಿಲ್ಲೆಯ ಎರಡು ಪ್ರಮುಖ ಸಕ್ಕರೆ ಕಾರ್ಖಾನೆಗಳನ್ನು ಪ್ರಾರಂಭಿಸಿ ರೈತರ ಋಣ ತೀರಿಸಲಿಲ್ಲ ಎಂದು ಬಿಜೆಪಿ ಮುಖಂಡ ಡಾ.ಇಂದ್ರೇಶ್ ಹೇಳಿದರು.


    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯುವ ಏಕೈಕ ವ್ಯಕ್ತಿ. ಮುಖ್ಯಮಂತ್ರಿಯಾದ ಬಳಿಕ ಕಾವೇರಿ ಮಾತೆಗೆ ಬಾಗಿನ ಅರ್ಪಿಸಲು ಆಗಮಿಸಿದ ಸಂದರ್ಭದಲ್ಲಿ ಜಿಲ್ಲೆಯ ಎರಡು ಕಾರ್ಖಾನೆಗಳನ್ನು ಆರಂಭಿಸುವುದಾಗಿ ರೈತರಿಗೆ ಭರವಸೆ ನೀಡಿದ್ದರು. ಅದರಂತೆ ಮೊದಲು ಪಾಂಡವಪುರದ ಪಿಎಸ್‌ಎಸ್ ಕಾರ್ಖಾನೆಯನ್ನು ಆರಂಭಿಸಿದರು. ಈಗ ಬೊಮ್ಮಾಯಿ ಅವರು ಮೈಶುಗರ್ ಕಾರ್ಖಾನೆ ಪುನರಾರಂಭಿಸುವ ಮೂಲಕ ಜಿಲ್ಲೆಯ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


    ಎರಡೂ ಕಾರ್ಖಾನೆಗಳನ್ನು ಆರಂಭಿಸಲು ಬಿಜೆಪಿ ಸರ್ಕಾರವೇ ಅಧಿಕಾರಕ್ಕೆ ಬರಬೇಕಿತ್ತು. ಜಿಲ್ಲೆಯಲ್ಲಿ ಏಳು ಶಾಸಕರನ್ನು ಗೆಲ್ಲಿಸಿಕೊಟ್ಟಾಗಲೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಕಾರ್ಖಾನೆ ಆರಂಭಿಸಲು ಕಿಂಚಿತ್ತೂ ಪ್ರಯತ್ನ ನಡೆಯಲಿಲ್ಲ. ಮಂಡ್ಯ ಜಿಲ್ಲೆಯನ್ನು ಜೆಡಿಎಸ್ ಭದ್ರಕೋಟೆ ಎಂದುಕೊಂಡ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಆ ಪಕ್ಷದ ಶಾಸಕರ ಇಚ್ಛಾಶಕ್ತಿ ಕೊರತೆಯಿಂದ ಕಾರ್ಖಾನೆ ಪ್ರಾರಂಭಿಸಲು ಸಾಧ್ಯವಾಗಿರಲಿಲ್ಲ. ಬಿಜೆಪಿ ಸರ್ಕಾರ ಜನಪರವಾಗಿದ್ದು, ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರ ಶ್ರಮದ ಫಲವಾಗಿ ಮೈಶುಗರ್ ಆರಂಭವಾಗಿದೆ. ಬಿಜೆಪಿ ಸರ್ಕಾರದ ಯೋಜನೆಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿದೆ ಎಂದರು.


    ಕಿಯೋನಿಕ್ಸ್ ನಿರ್ದೇಶಕ ಎಚ್.ಎನ್.ಮಂಜುನಾಥ್, ಮೈಶುಗರ್ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಬಿಜೆಪಿ ಕ್ಷೇತ್ರಾಧ್ಯಕ್ಷ ಎಲ್.ಅಶೋಕ್, ಜಿಲ್ಲಾ ಕಾರ್ಯದರ್ಶಿಗಳಾದ ಕೆ.ಎಲ್.ಆನಂದ್, ಕಾಂತರಾಜು, ನೀಲನಹಳ್ಳಿ ಧನಂಜಯ, ಸಂದೇಶ್, ಬಳಘಟ್ಟ ಅಶೋಕ್, ಚಿಕ್ಕಮರಳಿ ನವೀನ್, ರಾಜೀವ್ ತಮ್ಮಣ್ಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts