More

    ರೈತರ ಮೊಗದಲ್ಲಿ ಮಂದಹಾಸ

    ಬೆಳಗಾವಿ: ಜಿಲ್ಲಾದ್ಯಂತ ಗುರುವಾರ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೆಲ ಪಟ್ಟಣ ಪ್ರದೇಶಗಳಲ್ಲಿ ಚರಂಡಿಗಳು ತುಂಬಿ ಹರಿದು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಮಧ್ಯಾಹ್ನ 1 ಗಂಟೆಗೆ ಆರಂಭವಾದ ಮಳೆ ಬಿರುಗಾಳಿ, ಸಿಡಿಲು, ಗುಡುಗಿನ ಅರ್ಭಟದೊಂದಿಗೆ 2 ಗಂಟೆಗೂ ಹೆಚ್ಚು ಹೊತ್ತು ಸುರಿಯಿತು. ಕೆಲವೆಡೆ ಮರಗಳು, ವಿದ್ಯುತ್ ಕಂಬಗಳು ಬಿರುಗಾಳಿಗೆ ಉರುಳಿ ಬಿದ್ದು, ವಿದ್ಯುತ್ ವ್ಯತ್ಯಯ ಉಂಟಾಯಿತು.

    ಗೋಕಾಕ ನಗರ, ಸವದತ್ತಿ ಪಟ್ಟಣ ಪ್ರದೇಶದಲ್ಲಿ ಸತತ 2 ಗಂಟೆ ಸುರಿದ ಮಳೆಯಿಂದಾಗಿ ಚರಂಡಿಗಳು ಬ್ಲಾಕ್ ಆಗಿ ರಸ್ತೆಯ ಮೇಲೆ ನೀರು ಹರಿದು ವಾಹನ ಸವಾರರಿಗೆ, ರಸ್ತೆ ಪಕ್ಕದ ಮನೆಗಳಿಗೆ ಸಮಸ್ಯೆ ಉಂಟು ಮಾಡಿತು. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ನಿವಾಸಿಗಳಿಗೆ ಸಮಸ್ಯೆ ಎದುರಾಯಿತು. ಸವದತ್ತಿ, ಬೈಲಹೊಂಗಲ, ಗೋಕಾಕ, ಮೂಡಲಗಿ, ರಾಮದುರ್ಗ ತಾಲೂಕಿನ ವಿವಿಧ ಭಾಗಗಳಲ್ಲಿ ಬಿರುಗಾಳಿಗೆ ವಿದ್ಯುತ್ ಕಂಬಗಳು, ಮರಗಳು ಬಿದ್ದು ಸಮಸ್ಯೆ ಉಂಟು ಮಾಡಿತ್ತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೆಸ್ಕಾಂ ಇಂಜಿನಿಯರ್‌ಗಳು ತಿಳಿಸಿದ್ದಾರೆ.

    ಬಿತ್ತನೆ ಆರಂಭ: ಬೈಲಹೊಂಗಲ, ಕಿತ್ತೂರು, ಸವದತ್ತಿ ತಾಲೂಕಿನ ಕೆಲಸ ಹೋಬಳಿಗಳ ವ್ಯಾಪ್ತಿಯಲ್ಲಿ ಮುಂಗಾರು ಹಂಗಾಮಿನ ಬಿತ್ತನೆ ಆರಂಭವಾಗಿದೆ. ಈಗಾಗಲೇ ಈ ಭಾಗದ ಶೇ. 60 ಪ್ರದೇಶದಲ್ಲಿ ಸೋಯಾಬೀನ್, ಶೇಂಗಾ ಬಿತ್ತನೆಯಾಗಿದೆ. ಇನ್ನುಳಿದ ಭಾಗಗಳಲ್ಲಿ ಭೂಮಿಯಲ್ಲಿ ತೇವಾಂಶ ಕಡಿಮೆ ಮತ್ತು ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿರುವ ಕಾರಣ ಬಿತ್ತನೆ ಆರಂಭಗೊಂಡಿಲ್ಲ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts