More

    ರೈತರ ಸಾಲ ಮನ್ನಾ ಮಾಡಿ

    ಕೊರಟಗೆರೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್‌ನಲ್ಲಿ ರೈತರು ಬದುಕು ಕಟ್ಟಿಕೊಳ್ಳಲು ನೆರವಾಗುವ ಯೋಜನೆಗಳನ್ನು ೋಷಿಸಬೇಕು ಎಂದು ಶಾಸಕ ಡಾ.ಜಿ.ಪರಮೇಶ್ವರ್ ಮನವಿ ಮಾಡಿದರು.

    ತಾಲೂಕಿನ ಚನ್ನರಾಯನದುರ್ಗ ಹೋಬಳಿ ಜೋನಿಗರಹಳ್ಳಿಯಲ್ಲಿ ರಾಷ್ಟ್ರೀಯ ಸುಸ್ಥಿರ ಕೃಷಿ ಅಭಿಯಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಣ್ಣು ಆರೋಗ್ಯ ಕಾರ್ಡ್ ವಿತರಣೆ ಹಾಗೂ ರೈತರ ಮೇಳ ಉದ್ಘಾಟಿಸಿ ಮಾತನಾಡಿದರು.

    ಸಮ್ಮಿಶ್ರ ಸರ್ಕಾರದಲ್ಲಿ ಕುವಾರಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದಲ್ಲಿ ಸಿದ್ದರಾಮಯ್ಯ ಸುಮಾರು 10 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ವಾಡಿದ್ದರು. ಹೀಗಾಗಿ ಯಡಿಯೂರಪ್ಪ ಅವರೂ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಒತ್ತಾಯಿಸಿದರು.
    ರೈತರು ಸಾಂಪ್ರದಾಯಿಕ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ವ್ಯವಸಾಯ ಸಂಬಂಧಿತ ಮಾಹಿತಿ ದೊರಕುವಂತಾಗಲು ಗ್ರಾಮೀಣ ಭಾಗದಲ್ಲಿ ಕೃಷಿಮೇಳ ಹಾಗೂ ವಸ್ತು ಪ್ರದರ್ಶನಗಳು ಹೆಚ್ಚಾಗಿ ನಡೆಯಬೇಕು ಎಂದರು. ಪ್ರಗತಿಪರ ರೈತರಾದ ತಾಲೂಕಿನ ಸಿದ್ದಬಸಪ್ಪ, ಗೌರಮ್ಮ, ಜವರೇಗೌಡ, ದೊಡ್ಡಯ್ಯ, ಬಸವರಾಜು ಅವರನ್ನು ಸನ್ಮಾನಿಸಲಾಯಿತು.

    ತಾಲೂಕು ಪಂಚಾಯಿತಿ ಅಧ್ಯಕ್ಷೆ ನಾಜೀವಾಬಿ, ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯರಾದ ಜ್ಯೋತಿ, ಶ್ಯಾಮಲಾ, ಸುವಾ, ಪಪಂ ಸದಸ್ಯ ಎ.ಡಿ.ಬಲರಾಮಯ್ಯ, ಮಧುಗಿರಿ ಉಪ ವಿಭಾಗದ ನಿರ್ದೇಶಕ ಅಶೋಕ್, ತಾಲೂಕು ಸಹಾಯಕ ಕೃಷಿ ನಿರ್ದೇಶಕ ಎಚ್. ನಾಗರಾಜು. ಕೃಷಿ ವಿಜ್ಞಾನಿಗಳಾದ ಡಾ.ಬಿ.ಪಿ.ಶಶಿಕಾಂತ್, ಡಾ.ಹನುಮಂತೇಗೌಡ, ಡಾ. ರಾಜಶೇಖರ್, ಎಂ.ದೊರೆರು, ಕೆಪಿಸಿಸಿ ಕಾರ್ಯದರ್ಶಿ ದಿನೇಶ್, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಜೆ.ಎನ್ ನರಸಿಂಹರಾಜು, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಸೋಮಶೇಖರ್, ತಾಲೂಕು ಮಹಿಳಾ ಅಧ್ಯಕ್ಷೆ ಜಯಮ್ಮ, ಜಿಪಂ ಮಾಜಿ ಸದಸ್ಯ ಟಿ.ಡಿ ಪ್ರಸನ್ನ ಕುವಾರ್, ಬ್ಯಾಂಕ್ ವ್ಯವಸ್ಥಾಪಕ ಧನಂಜಯ್, ತಾಲ್ಲೂಕು ಕೃಷಿಕ ಸವಾಜದ ಅಧ್ಯಕ್ಷ ಹನುಮಂತೇಗೌಡ, ಸೇರಿದಂತೆ ಇತರರು ಇದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts