More

    ರೈತ ವಿರೋಧಿ ನೀತಿಗೆ ಆಕ್ರೋಶ

    ಗದಗ: ಭೂ ಸುಧಾರಣಾ ಕಾಯ್ದೆ, ವಿದ್ಯುಚ್ಛಕ್ತಿ ಖಾಸಗೀಕರಣ, ಎಪಿಎಂಸಿ ಕಾಯ್ದೆ ಹಾಗೂ ಕೂಲಿ ಕಾರ್ವಿುಕರ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

    ಸರ್ಕಾರ ರೈತ ವಿರೋಧಿ ಕಾಯ್ದೆ ಜಾರಿಗೊಳಿಸಿ ಅನ್ನದಾತರಿಗೆ ತೊಂದರೆ ನೀಡುತ್ತಿದೆ. ನೆರೆ ಹಾವಳಿ ಮತ್ತು ಕರೊನಾ ಸೋಂಕಿನಿಂದ ಬಡವರ ಜೀವನ ಅತ್ಯಂತ ಕಷ್ಟದಲ್ಲಿ ಸಿಲುಕಿದೆ. ಇಂತಹ ಸಂದಿಗ್ಧ ಸಮಯದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

    ಕಿತ್ತೂರ ಚನ್ನಮ್ಮ ವೃತ್ತದಿಂದ ಮುಳಗುಂದ ನಾಕಾ ವೃತ್ತ ನಾಕಾ ವೃತ್ತಕ್ಕೆ ಆಗಮಿಸಿದ ಪ್ರತಿಭಟನಾಕಾರರು ಕೆಲ ಹೊತ್ತು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ತದನಂತರ ಪ್ರತಿಭಟನಾಕಾರರು ಜಿಲ್ಲಾಡಳಿತ ಭವನಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಸುಂದರೇಶಬಾಬು ಅವರಿಗೆ ಮನವಿ ಸಲ್ಲಿಸಿದರು.

    ಸರ್ಕಾರ ಈಗಾಗಲೇ ಜಾರಿಗೊಳಿಸಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಕೂಲಿ ಕಾರ್ವಿುಕರ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆಯಬೇಕು. ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಲಾಗಿದೆ. ಪ್ರತಿಭಟನೆಯಲ್ಲಿ ರೈತ ಮುಖಂಡ ಬಸವರಾಜ ಸಾಬಳೆ ಸೇರಿ ಅನೇಕ ರೈತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts