More

    ರೈಲು ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದವರ ಬಂಧನ

    ಬಂಗಾರಪೇಟೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಷಿ ಕಾಯ್ದೆ ಹಾಗೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರುದ್ಧ ಗುರುವಾರ ಪಟ್ಟಣದ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ರೈಲುಗಳನ್ನು ತಡೆಯಲು ಯತ್ನಿಸಿದ ವಿವಿಧ ಸಂಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದರು.

    ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಹತ್ತಿಕ್ಕಲು ಕೇಂದ್ರ ಪೊಲೀಸರನ್ನು ದುರ್ಬಳಕೆ ವಾಡಿಕೊಳ್ಳುತ್ತಿದೆ, ರೈತರ ಸಮಸ್ಯೆಗೆ ಪರಿಹಾರ ಕಂಡು ಹಿಡಿಯವ ಬದಲು ನಿರ್ಲಕ್ಷ್ಯ ತೋರುತ್ತಿದೆ, ರೈತರ ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು ಎಂದು ಹೋರಾಟಗಾರರು ಗರ್ಜಿಸಿದರು. ರೈತ ಪರ ಸಂಟನೆಗಳು, ಕಾರ್ಮಿಕ ಸಂಟನೆಗಳು, ಜನಾಧಿಕಾರ ಸಂಟನೆ ಮತ್ತು ದಲಿತ ಸಂಟನೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

    ಸಿಪಿಎಂ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ವಾತನಾಡಿ, ದೆಹಲಿಯಲ್ಲಿ ರೈತರು ಹೋರಾಟ ವಾಡುತ್ತಿದ್ದು, 200ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಪ್ರಧಾನಿ ಮೋದಿ ಕಷಿ ಕಾಯ್ದೆ ಪಾಪಸ್ ಪಡೆಯದೆ ಮೊಂಡುತನ ಪ್ರದರ್ಶಿಸುತ್ತಿದ್ದಾರೆ, ನಾವು ರೈತರ ಪರ ಎಂದು ಹೇಳಿಕೊಳ್ಳುವುದಕ್ಕೆ ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದರು.

    ರೈತ ಸಂ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮೇಗೌಡ ಮಾತನಾಡಿ, ಪ್ರಧಾನಿ ಮೋದಿ ಅಂಬಾನಿ, ಅದಾನಿಗಳಿಗೆ ಲಾಭ ವಾಡಿಕೊಡಲು ರೈತ ವಿರೋಧಿ ಕಾಯ್ದೆ ಜಾರಿಗೆ ತಂದಿದ್ದು ಮುಂದಿನ ಚುನಾವಣೆಯಲ್ಲಿ ರೈತರು, ಕಾರ್ಮಿಕರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.
    ಕೆಪಿಆರ್‌ಎಸ್ ಜಿಲ್ಲಾಧ್ಯಕ್ಷ ಸೂರಿನಾರಾಯಣ, ಸಿಪಿಎಂ ಮುಖಂಡರಾದ ಪಿ.ಶ್ರೀನಿವಾಸ್, ಶ್ರೀರಾಮ್, ಸಿ.ಆರ್.ಮೂರ್ತಿ, ಅಲೀಕ್, ತಂಗರಾಜ್, ಜನಾಧಿಕಾರಿ ಸಂಟನೆ ಮುಖಂಡರಾದ ರಾಜಪ್ಪ, ಸಿ.ವಿ.ನಾಗರಾಜ್ ಇತರರು ಭಾಗವಹಿಸಿದ್ದರು.
    ಕಾಯ್ದೆ ವಿರೋಧಿಸಿ ರೈಲು ನಿಲ್ದಾಣಕ್ಕೆ ಮುತ್ತಿಗೆ: ರೈತ ವಿರೋಧಿ ಕಾಯ್ದೆ ಹಿಂಪಡೆಯಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಗುರುವಾರ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಪಟ್ಟಣದ ಮಿನಿ ವಿಧಾನಸೌಧದ ಬಳಿ ಜಮಾಯಿಸಿದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ, ಪ್ರಜಾಪ್ರಭುತ್ವದಡಿ ಅಧಿಕಾರಕ್ಕೆ ಬರುವ ಸರ್ಕಾರಗಳು ಕಾರ್ಪೋರೇಟ್ ಕಂಪನಿಗಳ ಪರ ನಿಂತು, ದೇಶದ ಎಲ್ಲ ವಲಯಗಳನ್ನು ಖಾಸಗೀಕರಣ ಮಾಡುತ್ತ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕೃಷಿ ಕಾಯ್ದೆಗಳ ವಿರುದ್ಧ 88 ದಿನಗಳಿಂದ ದೆಹಲಿಯಲ್ಲಿ ಹೋರಾಟ ಮಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯವನ್ನು ನಿಲ್ಲಿಸಿ, ರೈತ ವಿರೋಧಿ ಕಾಯ್ದೆ ಹಿಂಪಡೆಯಬೇಕು. ಇದರೊಂದಿಗೆ ದಿನೇ ದಿನೆ ಹೆಚ್ಚಾಗುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಕೃಷಿ ಸಲಕರಣೆ ಮತ್ತು ದಿನ ನಿತ್ಯದ ವಸ್ತುಗಳ ಬೆಲೆ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

    ರೈತ ಸಂಘದ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಅಧ್ಯಕ್ಷೆ ನಳಿನಿ, ತಾಲೂಕು ಅಧ್ಯಕ್ಷ ಮುನ್ನಾ, ಜಿಲ್ಲಾ ಮುಖಂಡ ಚಾಂದ್‌ಪಾಷಾ, ಹಸಿರು ಸೇನೆ ಜಿಲ್ಲಾಧ್ಯಕ್ಷ ಕಿರಣ್, ತಾಲ್ಲೂಕು ಅಧ್ಯಕ್ಷ ಚಲಪತಿ, ಅನಿಲ್, ಜಮೀರ್ ಪಾಷಾ, ಬಾಬಾ ಜಾನ್, ಜಾವಿದ್, ಗೌಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts