More

    ರೈಲ್ವೆ ಸೇತುವೆ ಕಾಮಗಾರಿ ವಿಳಂಬ; ಜೆಡಿಎಸ್ ಪ್ರತಿಭಟನೆ

    ಶಿವಮೊಗ್ಗ: ನಗರದಲ್ಲಿ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಶಿವಮೊಗ್ಗ ಮಹಾನಗರ ಜೆಡಿಎಸ್ ಘಟಕದ ಪದಾಧಿಕಾರಿಗಳು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಸವಳಂಗ ರಸ್ತೆ, ಸೋಮಿನಕೊಪ್ಪ ರಸ್ತೆ, ಹೊಳೆಹೊನ್ನೂರು ರಸ್ತೆಗಳಲ್ಲಿ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿದ್ದು ಸಾರ್ವಜನಿಕರ ಸಂಚಾರಕ್ಕೆ ಕಷ್ಟ ಮತ್ತು ಕಿರಿಕಿರಿ ಆಗುತ್ತಿದೆ ಎಂದು ದೂರಿದರು.
    ಮೇಲ್ಸೇತುವೆ ಅಥವಾ ಕೆಳಸೇತುವೆ ಭಾಗಗಳ ಮೂಲಕ ಹೊರ ಊರುಗಳಿಗೆ ಬಸ್‌ಗಳು ಸಾಗಬೇಕಾಗಿದೆ. ಆದರೆ ಕಾಮಗಾರಿಗಳು ನಡೆಯುತ್ತಿರುವ ಕಾರಣದಿಂದ ಹೊರಜಿಲ್ಲೆಗಳಿಂದ ಬರುವ ಮತ್ತು ಹೋಗುವ ವಾಹನಗಳು ಸುತ್ತುವರಿಯಬೇಕಾಗಿದೆ. ಪರ್ಯಾಯ ರಸ್ತೆಗಳು ಕೂಡ ಅವೈಜ್ಞಾನಿಕವಾಗಿವೆ ಎಂದು ಕಿಡಿಕಾರಿದರು.
    ಕಾಮಗಾರಿಗಳ ವಿಳಂಬದಿಂದ ಸಾರ್ವಜನಿಕರು, ಶಾಲಾ ಮಕ್ಕಳು ಓಡಾಡಲು ತೊಂದರೆ ಆಗುತ್ತಿದೆ. ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವಾಗ ಅಪಘಾತಗಳು ಹೆಚ್ಚುತ್ತಿದ್ದು, ಸಾವು-ನೋವು ಸಂಭವಿಸುತ್ತಿವೆ. ಧೂಳಿನಿಂದ ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಎಡಿಸಿ ಡಾ. ನಾಗೇಂದ್ರ ಎಫ್ ಹೊನ್ನಳ್ಳಿ ಅವರಿಗೆ ಮನವಿ ಸಲ್ಲಿಸಿದರು.
    ಜೆಡಿಎಸ್ ಅಧ್ಯಕ್ಷ ಗೋವಿಂದಪ್ಪ, ಕಾರ್ಯಾಧ್ಯಕ್ಷರಾದ ಸಿದ್ದಪ್ಪ, ಎಂ.ರಾಜಣ್ಣ, ಮಹಾ ಪ್ರಧಾನ ಕಾರ್ಯದರ್ಶಿ ಬಿ.ಎಸ್.ವಿನಯ್, ಮುಖಂಡರಾದ ಎಚ್.ಎಂ.ಸಂಗಯ್ಯ, ನರಸಿಂಹ ಗಂಧದಮನೆ, ಎಸ್.ಬಸವರಾಜ್, ಎಸ್.ಡಿ.ಪ್ರಸನ್ನಕುಮಾರ್, ಡಿ.ಶ್ಯಾಮು, ಉಷಾ ನಾಯ್ಕ, ಗೀತಾ ಸತೀಶ್ ಪ್ರತಿಭಟನೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts