More

    ರೋಗಗಳೆಡೆ ಇರಲಿ ಜಾಗೃತಿ

    ಚಿತ್ರದುರ್ಗ: ಮಲೇರಿಯಾ ಹಾಗೂ ಇತರ ಸಾಂಕ್ರಾಮಿಕ ರೋಗಗಳ ಕುರಿತಂತೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆಶಾ ಕಾರ್ಯಕರ್ತೆಯರು ಹೆಚ್ಚು ಗಮನಹರಿಸಬೇಕು ಎಂದು ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಸೂಚಿಸಿದರು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ರೋಗವಾಹಕ ಅಶ್ರೀತ ರೋಗಗಳ ನಿಯಂತ್ರಣ ಕಚೇರಿಯಿಂದ ಆಶಾ ಕಾರ್ಯಕರ್ತೆಯರಿಗೆ ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಎರಡು ದಿನಗಳ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಗುಣಮಟ್ಟದ ಜ್ವರ ಸಮೀಕ್ಷೆ ಹಾಗೂ ರಕ್ತ ಪರೀಕ್ಷೆ ಮಾಡುವುದು ಹಾಗೂ ಮಲೇರಿಯಾ ಎಂದು ದೃಢಪಟ್ಟಲ್ಲಿ ಪೂರ್ಣ ಚಿಕಿತ್ಸೆ ನೀಡಬೇಕು ಎಂದರು.
    ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಎನ್.ಕಾಶಿ, ಜಿಲ್ಲಾ ಕೀಟಶಾಸ್ತ್ರಜ್ಞೆ ನಂದಿನಿಕಡಿ, ಟಿ.ಮಲ್ಲಿಕಾರ್ಜುನ್, ಬಿ.ಆರ್.ನಾಗರಾಜ್, ಎಚ್.ಎ.ನಾಗರಾಜ್, ಶ್ರೀನಿವಾಸ್, ಲೋಕೇಶ್, ಪಾಂಡು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts