More

    ರೋಗಿಗಳಿಗೆ ಸಮಸ್ಯೆಯಾಗದಿರಲಿ

    ಅಥಣಿ: ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಡಿಸಿಎಂ ಲಕ್ಷ್ಮಣ ಸವದಿ ಭಾನುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿದರು. ಜತೆಗೆ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.

    ಕರೊನಾ-2ನೇ ಅಲೆ ಅಬ್ಬರಕ್ಕೆ ಜನ ತತ್ತರಿಸಿದ್ದಾರೆ. ಹೀಗಾಗಿ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಮಾಡಬೇಕು. ಕರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಆಸ್ಪತ್ರೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಾದರೆ ಹೊರಗಿನಿಂದ ಅಥವಾ ಸಕ್ಕರೆ ಕಾರ್ಖಾನೆಗಳಿಂದ ತಂದು ರೋಗಿಗಳ ಚಿಕಿತ್ಸೆಗೆ ಬಳಸಬೇಕು. ವೈದ್ಯರು ರಜೆ ಹಾಕದೆ ರೋಗಿಗಳ ಚಿಕಿತ್ಸೆಗೆ ಮುಂದಾಗಬೇಕು ಎಂದರು. ವೈದ್ಯಾಧಿಕಾರಿ ಡಾ.ಬಸಗೌಡ ಕಾಗೆ ಆಸ್ಪತ್ರೆಯಲ್ಲಿರುವ ವ್ಯವಸ್ಥೆ ಕುರಿತು ಸವದಿ ಗಮನಕ್ಕೆ ತಂದರು. ತಹಸೀಲ್ದಾರ್ ದುಂಡಪ್ಪ ಕೋಮಾರ, ವೈದ್ಯಾಧಿಕಾರಿ ಸಿ.ಎಚ್.ಪಾಟೀಲ ಇದ್ದರು.

    ಕರೊನಾ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ಕ್ರಮವಹಿಸಲು ಸರ್ಕಾರ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು.
    | ಲಕ್ಷ್ಮಣ ಸವದಿ ಡಿಸಿಎಂ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts