More

    ಲಕ್ಕುಂಡಿ ಉತ್ಸವ ಮಾ.15 ರಿಂದ

    ಗದಗ: ಮಾ.1 ಮತ್ತು 2ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ ಹಾಗೂ ಮಾ.15 ಮತ್ತು 16ರಂದು ಲಕ್ಕುಂಡಿ ಉತ್ಸವ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

    ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ಜಿಲ್ಲೆಯ ಲಕ್ಕುಂಡಿ ಉತ್ಸವವನ್ನು ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಫೆ. 15ರಂದು ಲಕ್ಕುಂಡಿಯಲ್ಲಿ ಈ ಕುರಿತಂತೆ ಸಮಾಲೋಚನಾ ಸಭೆ ಆಯೋಜಿಸಲಾಗಿದ್ದು, ಉತ್ಸವದ ಕುರಿತು ರ್ಚಚಿಲಾಗುವುದು ಎಂದು ಹೇಳಿದರು.

    ಉದ್ಯೋಗ ಮೇಳ: ಗದಗ ಬೆಟಗೇರಿಯ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮಾ.1 ಮತ್ತು 2ರಂದು ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಲು ಕೌಶಲಾಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

    ರಾಜ್ಯ ಸರ್ಕಾರ ಯುವಜನರಿಗೆ ಉದ್ಯೋಗ ಹಾಗೂ ಸ್ವ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಯುವ ಕೌಶಲ ನೀತಿ ಅನ್ವಯ ಏರ್ಪಡಿಸಲಾಗುತ್ತಿರುವ ಈ ಉದ್ಯೋಗ ಮೇಳದಲ್ಲಿ ರಾಜ್ಯ ಹಾಗೂ ದೇಶದ ವಿವಿಧ ಭಾಗಗಳ 60 ಕಂಪನಿಗಳ ಉದ್ಯೋಗದಾತರು ಭಾಗವಹಿಸುತ್ತಿದ್ದು ಸುಮಾರು 5 ಸಾವಿರ ಯುವಜನರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದರು.

    ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಜಿಲ್ಲೆಯ ಯುವಜನರಿಗೆ ಪರಿಣಾಮಕಾರಿಯಾಗಿ ಉದ್ಯೋಗ ಮೇಳದಲ್ಲಿ ಉದ್ಯೋಗವಕಾಶ ದೊರಕಿಸಲು ಕೌಶಲಾಭಿವೃದ್ಧಿ ಅಧಿಕಾರಿಗಳು ಅಗತ್ಯದ ಕ್ರಮಗಳನ್ನು ಕೈಕೊಳ್ಳಬೇಕು. ತಾಂತ್ರಿಕ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶವಿದ್ದು ಸ್ವಂತ ಜಿಲ್ಲಾ ಕೇಂದ್ರದಲ್ಲಿ ಉದ್ಯೋಗಕ್ಕಾಗಿ ಇರುವ ಅವಕಾಶಗಳನ್ನು ಎಲ್ಲರೂ ಬಳಸಿಕೊಳ್ಳಬೇಕು ಎಂದರು.

    ಉದ್ಯೋಗ ಮೇಳ ವೆಬ್​ಸೈಟ್​ಗೆ (ಡಿಡಿಡಿ.ಜಚಛಚಜ್ಠಛಢಟಜಞಛ್ಝಿಚ.ಟಞ) ಸಚಿವ ಸಿ.ಸಿ. ಪಾಟೀಲ ಚಾಲನೆ ನೀಡಿದರು. ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತ ಮನ್ಸೂರಅಲಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಬಸವರಾಜ ಮಲ್ಲೂರು, ಯುವಜನ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ವಿಶ್ವನಾಥ ಇದ್ದರು.

    ವಿಜ್ಞಾನಿಯಿಂದ ಪರಿಶೀಲನೆ: ನರಗುಂದದಲ್ಲಿ ಉಂಟಾಗುತ್ತಿರುವ ಭೂಕುಸಿತದ ಸಮಸ್ಯೆ ಗಂಭೀರವಾಗಿದದ್ದು, ಈ ಹಿನ್ನೆಲೆಯಲ್ಲಿ ಹಿರಿಯ ವಿಜ್ಞಾನಿ ಎಚ್.ಎಸ್.ಎಂ. ಪ್ರಕಾಶ ಅವರನ್ನು ನರಗುಂದಕ್ಕೆ ಕರೆಸಿಕೊಳ್ಳಲಾಗಿದ್ದು, ಎರಡು ದಿನಗಳ ಕಾಲ ಅವರು ನರಗುಂದದಲ್ಲಿ ಭೂಕುಸಿತದ ಕಾರಣಗಳ ಕುರಿತು ಪರಿಶೀಲನೆ ನಡೆಸುವರು. ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅವರ ಜೊತೆಗಿರುತ್ತಾರೆ ಎಂದು ಸಚಿವ ಸಿ.ಸಿ.ಪಾಟೀಲ ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts