More

    ಲಕ್ಷ್ಮೀ ಹೆಬ್ಬಾಳ್ಕರ್ ಬಿರುಸಿನ ಪ್ರಚಾರ

    ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದ ಜನರಿಗೆ ನೀಡಿದ್ದ ಭರವಸೆಗಳಲ್ಲಿ ಶೇ.98 ಈಡೇರಿಸಿದ್ದೇನೆ. ವಿರೋಧ ಪಕ್ಷದ ಶಾಸಕಿಯಾಗಿದ್ದರಿಂದ ಶೇ.2 ಭರವಸೆಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿ ಕಾಂಗ್ರೆಸ್ ಸರ್ಕಾರ ಅವುಗಳನ್ನು ಈಡೇರಿಸಲು ಮೊದಲ ಆದ್ಯತೆ ನೀಡುವಂತೆ ಮಾಡುತ್ತೇನೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು

    ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಸೇರಿ ವಿವಿಧ ಗ್ರಾಮಗಳಲ್ಲಿ ಗುರುವಾರ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರ ಹಲವು ವರ್ಷಗಳಿಂದ ಅಭಿವೃದ್ಧಿ ಕಾಣದೆ ಹಿಂದುಳಿದಿದ್ದರಿಂದ ಕಳೆದ ಬಾರಿ ಮೂಲಸೌಕರ್ಯಗಳಿಗೆ ಮೊದಲ ಆದ್ಯತೆ ನೀಡಿದ್ದೇನೆ. ರಸ್ತೆ, ಚರಂಡಿ, ಕುಡಿಯುವ ನೀರು, ಶಾಲೆ, ದೇವಸ್ಥಾನ, ಸಮುದಾಯ ಭವನಗಳ ಬೇಡಿಕೆ ಈಡೇರಿಸಿದ್ದೇನೆ. ಇದರ ಜತೆಗೆ ಕಾಲೇಜು ಮತ್ತು ಆಸ್ಪತ್ರೆ ಕಟ್ಟಿಸುವ ಯೋಜನೆಯನ್ನೂ ಹಾಕಿಕೊಂಡಿದ್ದೆ. ಆದರೆ, ನಮ್ಮ ಸರ್ಕಾರವಿಲ್ಲದ್ದರಿಂದ ಸಾಧ್ಯವಾಗಲಿಲ್ಲ. ಮುಂದಿನ ದಿನಗಳಲ್ಲಿ ಅವುಗಳನ್ನೂ ಈಡೇರಿಸುತ್ತೇನೆ ಎಂದರು.

    ಜಲಸಂಪನ್ಮೂಲ ಇಲಾಖೆಯಿಂದ 695.81 ಕೇಟಿ ರೂ., ಸಣ್ಣ ನೀರಾವರಿ ಇಲಾಖೆಯಿಂದ 3,092 ಲಕ್ಷ ರೂ., ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 5142.74 ಲಕ್ಷ ರೂ., ಲೋಕೋಪ ಯೋಗಿ ಇಲಾಖೆಯಿಂದ 1694.35 ಲಕ್ಷರೂ., ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ 100 ಲಕ್ಷ ರೂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 50 ಲಕ್ಷ ರೂ., ಪ್ರವಾಸೋದ್ಯಮ ಇಲಾಖೆಯಿಂದ 300 ಲಕ್ಷ ರೂ., ಹಿಂದುಳಿದ ವರ್ಗಗಳ ಇಲಾಖೆಯಿಂದ 100 ಲಕ್ಷ ರೂ., ಶಾಸಕರ ನಿಧಿಯಿಂದ 792 ಲಕ್ಷ ರೂ., ಗ್ರಾಮೀಣಾ ಭಿವೃದ್ಧಿ ನಿಗಮದಿಂದ 800 ಲಕ್ಷ ರೂ., ಮುಜರಾಯಿ ಇಲಾಖೆಯಿಂದ 960 ಲಕ್ಷ ರೂ., ರಸ್ತೆ, ದೇವಸ್ಥಾನ, ಬ್ರಿಡ್ಜ್ ಕಂ ಬಾಂದಾರ, ಕೆರೆಗಳ ಅಭಿವೃದ್ಧಿ, ಸರ್ಕಾರಿ ಶಾಲೆಗಳ ಕೊಠಡಿ ನಿರ್ಮಾಣ – ದುರಸ್ತಿ, ಶಾಲಾ ಮೈದಾನಗಳ ಅಭಿವೃದ್ಧಿಗೆ ವಿಶೇಷ ಅನುದಾನ ತಂದಿದ್ದೇನೆ ಎಂದು ವಿವರಿಸಿದರು.

    ಕ್ಷೇತ್ರದಲ್ಲಿ ಗ್ರಾಮೀಣ ಬಸ್ ನಿಲ್ದಾಣ, ವಾಲ್ಮೀಕಿ ಭವನ, ಮರಾಠ ಭವನ, ಅಂಬೇಡ್ಕರ್ ಭವನ, 103 ದೇವಸ್ಥಾನಗಳ ನಿರ್ಮಾಣ ಮತ್ತು ಜೀರ್ಣೋದ್ಧಾರ, ಜೈನ ಬಸದಿ, ಮಸೀದಿ, ಚರ್ಚ್‌ಗಳ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದೇನೆ. ರಾಜಹಂಸಗಡದಲ್ಲಿ ದೇಶದಲ್ಲೇ ಬೃಹತ್ತಾದ, ಅಪರೂಪದ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣ ಮಾಡಿ ಕೋಟೆ ಅಭಿವೃದ್ಧಿ ಮಾಡಿಸಿದ್ದೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದೇನೆ ಎಂದು ತಿಳಿಸಿದರು. ಸ್ಥಳೀಯ ಯುವಕ ಸಂಘಗಳು, ಮಹಿಳಾ ಮಂಡಳಗಳು, ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘಗಳು ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸಂಪೂರ್ಣ ಬೆಂಬಲ ಘೋಷಿಸಿದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts