More

    ಮಕ್ಕಳು ಶಿಕ್ಷಣದಿಂದ ವಂಚಿತರಾದಿರಲಿ

    ಯಲಬುರ್ಗಾ: ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
    ತಾಲೂಕಿನ ವಣಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಾಣವಾದ 60 ಲಕ್ಷ ರೂ. ವೆಚ್ಚದ ಐದು ಹೆಚ್ಚುವರಿ ಕೊಠಡಿಗಳನ್ನು ಇತ್ತೀಚೆಗೆ ಉದ್ಘಾಟಿಸಿ ಮಾತನಾಡಿದರು.

    ಗುಣಾತ್ಮಕ ಶಿಕ್ಷಣ ನೀಡಿ

    ಆಡಳಿತಾವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು. ಮುಂದಿನ ದಿನಗಳಲ್ಲಿ ಯಲಬುರ್ಗಾ ಮತ್ತು ಕುಕನೂರು ತಾಲೂಕಿನಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳನ್ನು ಮಂಜೂರು ಮಾಡಿಸಲಾಗುವುದು. ಒಂದೇ ಒಂದು ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶವಿದೆ. ಎಲ್ಲ ಶಾಲೆಗಳಲ್ಲಿ ಮೂಲ ಸೌಕರ್ಯ, ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.

    ಇದನ್ನೂ ಓದಿ: VIDEO | ಸ್ಟಾರ್ ನಟನ ಮೇಲೆ ಚಪ್ಪಲಿ ಎಸೆದ ದುಷ್ಕರ್ಮಿಗಳು! ತೀವ್ರ ಆಕ್ರೋಶ ವ್ಯಕ್ತಪಡಿಸಿದ ಫ್ಯಾನ್ಸ್​..

    ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸಿ ವಿದ್ಯಾವಂತರನ್ನಾಗಿಸುವ ಸಂಕಲ್ಪ ತೊಡಬೇಕು. ಕಲಿಕಾ ಹಂತದಲ್ಲಿ ವಿದ್ಯಾರ್ಥಿಗಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ದೂಡಬಾರದು. ಎಲ್‌ಕೆಜಿಯಿಂದ ಪಿಜಿವರೆಗೂ ಶಿಕ್ಷಣ ವ್ಯವಸ್ಥೆಯನ್ನು ಕ್ಷೇತ್ರದಲ್ಲಿ ಮಾಡಲಾಗಿದೆ. ಹೀಗಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ವೀರನಗೌಡ ಬಳೂಟಗಿ, ಯಂಕಣ್ಣ ಯರಾಶಿ, ಕೆರಿಬಸಪ್ಪ ನಿಡಗುಂದಿ, ಗಿಡ್ಡಪ್ಪ ವಣಗೇರಿ, ಎ.ಜಿ.ಭಾವಿಮನಿ, ತಹಸೀಲ್ದಾರ್ ಬಸವರಾಜ ತೆನ್ನಳ್ಳಿ, ತಾಪಂ ಇಒ ಸಂತೋಷ ಪಾಟೀಲ್, ಬಿಇಒ ಕೆ.ಟಿ.ನಿಂಗಪ್ಪ, ಜಿಪಂ ಎಇಇ ಶ್ರೀಧರ ತಳವಾರ್, ಪಿಡಿಒ ವೆಂಕಟೇಶ ನಾಯ್ಕ ಹಾಗೂ ಶಿಕ್ಷಕರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts