More

    ಲಸಿಕೆ ನೀಡಲು ವ್ಯವಸ್ಥೆ ಮಾಡಿಕೊಳ್ಳಿ

    ಗದಗ: ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ಯನ್ನು ಶೀಘ್ರದಲ್ಲೇ ವಿತರಿಸಲಾಗುತ್ತಿದ್ದು, ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ

    ಎಂ. ಸುಂದರೇಶಬಾಬು ಅವರು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಸಿಕೆ ನೀಡಲು ಗುರುತಿಸಲಾದ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಇರಬೇಕು. ಲಸಿಕೆ ತೆಗೆದುಕೊಳ್ಳಲು ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ಸೋಂಕು ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪರಸ್ಪರ ಅಂತರ ಕಾಯ್ದುಕೊಂಡು ಲಸಿಕೆ ಪಡೆಯಲು ಸೂಚಿಸಬೇಕು ಎಂದು ಹೇಳಿದರು.

    ಡಾ. ಬಿ.ಎಂ. ಗೋಜನೂರ ಮಾತನಾಡಿ, ಪ್ರಥಮ ಹಂತದ ಕೋವಿಡ್ ಲಸಿಕೆ ನೀಡಲು ಜಿಲ್ಲೆಯಲ್ಲಿ 48 ಸೆಂಟರ್​ಗಳನ್ನು ಈಗಾಗಲೇ ಗುರುತಿಸಲಾಗಿದೆ. ಪ್ರತಿ ಸೆಂಟರ್​ನಲ್ಲಿ ದಿನಕ್ಕೆ 100 ಜನರಿಗೆ ಲಸಿಕೆ ಹಾಕಬಹುದು. ಪ್ರಥಮ ಹಂತದಲ್ಲಿ ಲಸಿಕೆ ನೀಡಲು ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಸಿಬ್ಬಂದಿ ಸೇರಿ 8895 ಜನರು ಕಾರ್ಯ ನಿರ್ವಹಿಸಲಿದ್ದಾರೆ ಎಂದರು. ಜಿಪಂ ಸಿಇಒ ಡಾ. ಆನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ, ಜಿಲ್ಲಾ ಸಮೀಕ್ಷಾಣಾಧಿಕಾರಿ ಡಾ. ಜಗದೀಶ ನುಚ್ಚಿನ, ಜಿಮ್್ಸ ನಿರ್ದೇಶಕ ಡಾ. ಪಿ.ಎಸ್. ಭೂಸರಡ್ಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts