More

    ಲಾನುಭವಿಗಳ ಆಧಾರ್ ಲಿಂಕ್ ಮಾಡಿಸಿ : ಅಧಿಕಾರಿಗಳಿಗೆ ಅಪರ ಮುಖ್ಯಕಾರ್ಯದರ್ಶಿ ಮಹೇಂದ್ರ ಜೈನ್ ಸೂಚನೆ

    ರಾಮನಗರ : ಜಿಲ್ಲಾಡಳಿತದಿಂದ ನೀಡಲಾಗುವ ವಿವಿಧ ಸಾಮಾಜಿಕ ಪಿಂಚಣಿಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದ್ದು, ಇನ್ನೂ ಲಿಂಕ್ ಮಾಡಿಸದಿರುವ ಲಾನುಭವಿಗಳಿಗೆ ತಿಳಿಸಿ ಜೋಡಣೆ ಮಾಡಿಸುವಂತೆ ಅಧಿಕಾರಿಗಳಿಗೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಆಧಾರ್ ಸೀಡಿಂಗ್ ಮಾಡುವುದರಿಂದ ಫಲಾನುಭವಿಯ ಮರಣಾನಂತರ ಪಿಂಚಣಿ ನಿಲ್ಲಿಸಬಹುದು.

    ಫಲಾನುಭವಿಗಳು ಸ್ವಯಂಪ್ರೇರಿತವಾಗಿ ಆಧಾರ್ ಲಿಂಕ್ ಮಾಡಿಕೊಳ್ಳುವಂತೆ ಜಾಗೃತಿ ಮೂಡಿಸಿ ನಂತರವು ಆಧಾರ್ ಸೀಡಿಂಗ್ ಮಾಡದಿದ್ದಲ್ಲಿ ನೋಟಿಸ್ ಜಾರಿ ಮಾಡಿ ತಡೆಹಿಡಿಯಲು ಕ್ರಮ ವಹಿಸುವಂತೆ ತಿಳಿಸಿದರು.

    ಕೆರೆ ಅಥವಾ ಸರ್ಕಾರಿ ಜಾಗಗಳ ಒತ್ತುವರಿಯಾಗಿದ್ದಲ್ಲಿ ತೆರವುಗೊಳಿಸಲು ಕ್ರಮ ಕೈಗೊಂಡು, ತೆರವುಗೊಳಿಸಿದ ಸ್ಥಳಗಳು ಸಾರ್ವಜನಿಕ ಉದ್ದೇಶಕ್ಕೆ ಬೇಕಿದ್ದಲ್ಲಿ ಕ್ರಮವಹಿಸಿ ಅವುಗಳನ್ನು ಹಸ್ತಾಂತರ ಮಾಡಿ. ಇಲ್ಲವಾದಲ್ಲಿ ತೆರವುಗೊಳಿಸಿದ ನಂತರವೂ ಬಹಳ ವರ್ಷ ಖಾಲಿ ಬಿಟ್ಟರೆ ಅತಿಕ್ರಮಣವಾಗುವ ಸಾಧ್ಯತೆ ಇರುತ್ತದೆ ಎಂದರು.

    ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಮಾತನಾಡಿ, ಕೋವಿಡ್-19 ಲಸಿಕೆ ಸಂಬಂಧಿಸಿದಂತೆ ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ನೀಡಿ ಶೇ.75ರಷ್ಟು ಸಾಧನೆ ಮಾಡಲಾಗಿದೆ. ಮುಂಚೂಣಿ ವರ್ಕರ್‌ಗಳಿಗೆ ಲಸಿಕೆ ನೀಡಲಾಗುತ್ತಿದೆ. ಯಾವುದೇ ತೊಂದರೆಯಾಗಿಲ್ಲ ಎಂದರು.
    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ಉಪವಿಭಾಗಾಧಿಕಾರಿ ದಾಕ್ಷಾಯಣಿ, ತಹಸೀಲ್ದಾರ್‌ಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

    ನೀರಿನ ಸಮಸ್ಯೆಯಾಗದಂತೆ ಸಿದ್ಧತೆ ಮಾಡಿಕೊಳ್ಳಿ : ಬೇಸಿಗೆ ಹತ್ತಿರವಾಗುತ್ತಿದ್ದು, ಜನರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಎಚ್ಚರಿಕೆ ವಹಿಸಿ. ನೀರಿನ ಸಮಸ್ಯೆ ಎದುರಿಸುವ ಗ್ರಾಮಗಳನ್ನು ಪಟ್ಟಿ ಮಾಡಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು. ಪ್ರತಿ ತಿಂಗಳು 3ನೇ ಶನಿವಾರ ಆಯ್ದ ಗ್ರಾಮವೊಂದರಲ್ಲಿ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಆಯೋಜಿಸಬೇಕಿದ್ದು, ಈ ಬಗ್ಗೆ ಜನರಿಗೆ ಮಾಹಿತಿ ನೀಡಿ ಸಮಸ್ಯೆಗಳನ್ನು ಆದಷ್ಟು ಸ್ಥಳ ದಲ್ಲಿಯೇ ಬಗೆಹರಿಸಿ ಎಂದು ಮಹೇಂದ್ರಜೈನ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts