More

    ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಕಾಂಗ್ರಸ್ ಪ್ರತಿಭಟನೆ

    ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರಸ್ ಮುಖಂಡರು ಮತ್ತು ಕಾರ್ಯಕರ್ತರು ಡಿಸಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
    ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಎಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ವಿವಿಧ ನಾಮಫಲಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.
    ಈ ವೇಳೆ ರಾಜ್ಯಸಭೆ ಮಾಜಿ ಸದಸ್ಯ ಎಚ್.ಕೆ.ಜವರೇಗೌಡ ಅವರು ಮಾತನಾಡಿ, ಪ್ರಜ್ವಲ್ ರೇವಣ್ಣ ಒಬ್ಬ ಸಂದಸನಾಗಿ ಮಹಿಳೆಯರ ಮಾನಹರಾಜು ಹಾಕಿದ್ದಾನೆ. ಹಿಂದೆ ದೇಶದಲ್ಲಿ ಇಂತಹ ದೃಷ್ಕೃತ್ಯ ಎಂದೂ ನಡೆದಿಲ್ಲ, ಮುಂದೆಯೂ ನಡೆಯಬಾರು. ಆದ್ದರಿಂದ ಆತನನ್ನು ಕೂಡಲೇ ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಆತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿಕೊಂಡು ಹಾದಿ-ಬೀದಿಯಲ್ಲಿ ಹೆಣ್ಣುಮಕ್ಕಳ ಮಾನಹರಾಜು ಹಾಕಿದ್ದಾನೆ. ಈ ಪ್ರಕರಣದ ಸಂತ್ರಸ್ತರು ಮುಂದೆ ಬಂದು ಘಟನೆ ಕುರಿತು ಸಾಕ್ಷಿೃ ಹೇಳುವ ಮೂಲಕ ಆತನಿಗೆ ಶಿಕ್ಷೆ ಕೊಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
    ಜನಸೇವೆ ಮಾಡಲು ರಾಜಕಾಣಕ್ಕೆ ಬರುತ್ತಾರೆ. ಆದರೆ ಈತ ರಾಜಕೀಯ ಅಧಿಕಾರ ಪಡೆದುಕೊಂಡು ಮಹಿಳೆಯರ ಅಸಹಾಯಕತೆಯನ್ನು ಬಳಸಿಕೊಂಡು ಶೋಷಣೆ ಎಸಗಿದ್ದಾರೆ. ಯಾರು ಜೆಡಿಎಸ್ ಪಕ್ಷ ಬೆಳೆಸಲು ಶ್ರಮಿಸಿದರು ಅಂತವರ ಮನೆ ಹೆಣ್ಣುಮಕ್ಕಳ ಮೇಲೆಯೇ ದೌರ್ಜನ್ಯ ಎಸಗಿದ್ದಾನೆ. ಈ ಘಟನೆಯನ್ನು ಎಲ್ಲರು ಖಂಡಿಸುವ ಮೂಲಕ ಸಂತ್ರಸ್ತ ಹೆಣ್ಣುಮಕ್ಕಳಿಗೆ ನ್ಯಾಯ ಸಿಗಬೇಕಾದರೆ, ಆರೋಪಿ ಎಲ್ಲೇ ಇದ್ದರೂ ಹಿಡಿದು ಬಂಧಿಸಿ, ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.
    ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ತಾರಾ ಚಂದನ್ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಪೆನ್‌ಡ್ರೈವ್‌ನಿಂದ ಹಲವು ಮಹಿಳೆಯರ ಬದುಕು ಬೀದಿಗೆ ಬೀಳುವಂತಾಗಿದೆ. ಜೆಡಿಎಸ್ ಪಕ್ಷದ ಮಹಿಳಾ ಕಾರ್ಯಕರ್ತೆಯನ್ನು ನಗ್ನಗೊಳಿಸಿ ಫೋಟೋ, ವಿಡಿಯೋ ಮಾಡಿ ಅವುಗಳನ್ನು ಹರಿಬಿಟ್ಟು ಅವಮಾನ ಮಾಡಿದ್ದಾರೆ. ಕೂಡಲೇ ಆತನನ್ನು ಬಂಧಿಸಬೇಕು ಹಾಗು ಕೇಂದ್ರ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
    ಕಾಂಗ್ರೆಸ್ ಜಿಲ್ಲಾಧ್ಯಕ್ಷ ಈ.ಹೆಚ್.ಲಕ್ಷ್ಮಣ್ ಮಾತನಾಡಿ, ಪ್ರಜ್ವಲ್ ರೇವಣ್ಣ ಒಬ್ಬ ಸಂಸದನಾಗಿ ಅವರ ಬಳಿ ಸಹಾಯ ಕೇಳಿಕೊಂಡು ಬರುವ ಅವರ ಪಕ್ಷದ ಕಾರ್ಯಕರ್ತೆಯರು, ಮಹಿಳೆಯರ ಮಾನ, ಶೀಲ ಕೆಡಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಕ್ಕೆ ಜಿಲ್ಲೆಯ ಜನರು ಅವಮಾನ ಅನುಭವಿಸುವ ಸಂದರ್ಭ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪದೇ ಪದೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆರೋಪ ಮಾಡುತ್ತಿರುವುದು ಖಂಡನೀಯ. ಪ್ರಜ್ವಲ್ ರೇವಣ್ಣನಿಗೆ ನಾವ್ಯಾರಾದರೂ ವಿಡಿಯೋ ಮಾಡಿಕೊಳ್ಳಲು ಹೇಳಿದ್ದಿವಾ. ಅವು ಬಹಿರಂಗಗೊಂಡ ಬಳಿಕ ಕಾಂಗ್ರೆಸ್‌ನವರು ಬಿಟ್ಟವರು ಎಂದು ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದರು.
    ವಕ್ತಾರ ದೇವರಾಜೇಗೌಡ, ಮುಖಂಡರಾದ ಎಚ್.ಕೆ. ಮಹೇಶ್,ಬಾಗೂರು ಮಂಜೇಗೌಡ, ರಂಜಿತ್ ಗೊರೂರು, ದಿನೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts