More

    ಲೋಂಡಾ-ರಾಮನಗರ ಹೆದ್ದಾರಿ ಕಾಮಗಾರಿ ಆರಂಭಿಸಿ

    ಬೆಳಗಾವಿ: ಸುಗಮ ಸಂಚಾರಕ್ಕಾಗಿ ಲೋಂಡಾ-ರಾಮನಗರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಆರಂಭಿಸಬೇಕು. ಅಲ್ಲದೆ, ಖಾನಾಪುರ ಪಟ್ಟಣದ ಮುಖ್ಯ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಎಂದು ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನೀತಿನ್ ಗಡ್ಕರಿ ಅವರನ್ನು ಒತ್ತಾಯಿಸಿದರು.

    ಮಂಗಳವಾರ ದೆಹಲಿಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಭಾರಿ ಮಳೆ ಹಾಗೂ ಪ್ರವಾಹದಿಂದ ಕ್ಷೇತ್ರದಲ್ಲಿನ ಬಹುತೇಕ ರಸ್ತೆಗಳು ಹದಗೆಟ್ಟಿವೆ. ವಾಹನ ಸಂಚಾರಕ್ಕಾಗಿ 40 ಹಳ್ಳಿಗಳ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ತ್ವರಿತವಾಗಿ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿದರು. ಲೋಂಡಾ-ರಾಮನಗರ ರಸ್ತೆ ಹಾಗೂ ಸೇತುವೆ ಅಧೋಗತಿಗೆ ತಲುಪಿರುವುದನ್ನು ಚಿತ್ರಸಹಿತವಾಗಿ ಸಚಿವರಿಗೆ ವಿವರಿಸಿದರು.

    ಖಾನಾಪುರ ಪಟ್ಟಣದ ಬಳಿ ಇರುವ ಸೇತುವೆ ಪ್ರತಿ ಬಾರಿ ಪ್ರವಾಹದಲ್ಲಿ ಮುಳುಗಡೆ ಆಗುತ್ತಿದೆ. ಇದರಿಂದಾಗಿ ಗೋವಾ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಂಪರ್ಕ ಕಡಿತಗೊಳ್ಳುತ್ತಿದೆ.

    ತಾಲೂಕಿನ ವಿವಿಧ ಗ್ರಾಮಗಳ ಜನರು ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ, ಸೇತುವೆಯ ಎತ್ತರ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು. ಅದಕ್ಕೆ ಸ್ಪಂದಿಸಿದ ಸಚಿವರು, ತಕ್ಷಣವೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕರ್ನಾಟಕ ಮುಖ್ಯಸ್ಥರಿಗೆ ಕರೆ ಮಾಡಿ ಕೂಡಲೇ ರಸ್ತೆ ದುರಸ್ತಿಗಾಗಿ ಹೊಸ ಟೆಂಡರ್ ಕರೆಯುವಂತೆ ಸೂಚಿಸಿದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts