More

    ಲೋಕಸಭಾ ಚುನಾವಣೆ: 4 ನಾಮಪತ್ರ ಸಲ್ಲಿಕೆ

    ಹಾಸನ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಂಗಳವಾರ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
    ಡಿ.ಎಸ್.ಗಂಗಾಧರ (ಬಹುಜನ ಸಮಾಜ ಪಕ್ಷ), ಜಿ.ಹೊಳೆಯಪ್ಪ .(ಲೋಕ್ ಶಕ್ತಿ), ಎಂ. ಮಹೇಶ್ ಉರ್ಫ್ ಹರ್ಷ(ಪಕ್ಷೇತರ), ಜೆ.ಡಿ.ಬಸವರಾಜು (ಪಕ್ಷೇತರ) ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಸಿ. ಸತ್ಯಭಾಮಾ ಅವರಿಗೆ ನಾಮಪತ್ರವನ್ನು ಸಲ್ಲಿಸಿದರು.
    ಇದುವರೆಗೆ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 9 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 4 ಕೊನೆಯ ದಿನವಾಗಿದೆ. ಏ.5ರಂದು ನಾಮಪತ್ರ ಪರಿಶೀಲನೆ, ಏ.8ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ. ಏ.26ರಂದು ಚುನಾವಣಾ ಮತದಾನ ನಡೆಯಲಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಕೆ ಮಾಡಬಹುದು.

    ಬಿಎಸ್‌ಪಿ ಅಭ್ಯರ್ಥಿಯಾಗಿ ಗಂಗಾಧರ್ ಮೆರವಣಿಗೆ:
    ಹಾಸನ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಗಂಗಾಧರ್ ಬಹುಜನ್ ಮಂಗಳವಾರ ನಾಮಪತ್ರ ಸಲ್ಲಿಸಿದರು.
    ಇದಕ್ಕೂ ಮುನ್ನ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಎನ್.ಆರ್.ವೃತ್ತದ ಮೂಲಕ ತೆರೆದ ವಾಹನದಲ್ಲಿ ನೂರಾರು ಮಂದಿಯೊಂದಿಗೆ ಆಗಮಿಸಿದ ಗಂಗಾಧರ್, ಮಧ್ಯಾಹ್ನ ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು.
    ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ರಾಜ್ಯ ಉಸ್ತುವಾರಿ ಎಂ.ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್, ಜಿಲ್ಲಾಧ್ಯಕ್ಷ ಅತ್ನಿ ಹರೀಶ್, ಶಿವಮ್ಮ ಮೊದಲಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts