More

    ಲೋಕಸಭೆಗೆ ಸ್ಥಳೀಯರಿಗೆ ಟಿಕೆಟ್ ನೀಡಿ

    ಚಿತ್ರದುರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರಕ್ಕೆ ಸ್ಥಳೀಯರಿಗೆ ಟಿಕೆಟ್ ನೀಡುವುದರಿಂದ ಪಕ್ಷಕ್ಕೆ ಅನುಕೂಲ. ಅಲ್ಲದೆ, ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಕಾಂಗ್ರೆಸ್ ಮುಖಂಡ ಜೆ.ಜೆ.ಹಟ್ಟಿ ಡಾ.ಬಿ.ತಿಪ್ಪೇಸ್ವಾಮಿ ಹೇಳಿದರು.

    ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ಸನ್ನಿಹಿತವಾಗುತ್ತಿದ್ದು, ಕ್ಷೇತ್ರ ಸಂಚಾರ ವೇಳೆ ಹೊರಗಿನವರಿಗೆ ಮಣೆ ಹಾಕುವ ಸಂಪ್ರದಾಯಕ್ಕೆ ಇತಿಶ್ರೀ ಹಾಡಬೇಕು ಎಂದು ಜನ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

    2009ರಲ್ಲಿ ನಾಯಕ ರಾಹುಲ್ ಗಾಂಧಿ ಅವರು ಟಿಕೆಟ್ ನೀಡಿ ಅವಕಾಶ ಕಲ್ಪಿಸಿದ್ದರು. ಇದಕ್ಕೆ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಕೂಡ ಕಾರಣರಾಗಿದ್ದರು. ಬೆನ್ನೆಲುಬಾಗಿ ನಿಂತು ತಿರುಗಾಡಿದರು. ಆದರೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಕಾರಣ ಪರಾಭವಗೊಂಡೆ ಎಂದರು.

    2008ರಲ್ಲಿ ವಿಧಾನಸಭೆಗೆ, 2014ರಲ್ಲಿ ಎಂಎಲ್ಸಿ, ಲೋಕಸಭೆ ಚುನಾವಣೆಗೆ ಕೊನೆ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದು, ನನಗೆ ಅನ್ಯಾಯವಾಗಿದೆ. ಯಾರದೋ ಬಾಲವನ್ನಿಡಿದು ಟಿಕೆಟ್ ಗಿಟ್ಟಿಸಿಕೊಂಡಿಲ್ಲ. ತಳ ಮಟ್ಟದಿಂದ ಪಕ್ಷ ಸಂಘಟನೆಗೆ ಶ್ರಮಿಸಿದ್ದು, ಟಿಕೆಟ್ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದರು.

    ಮುಖಂಡ ಓ.ಶಂಕರ್ ಮಾತನಾಡಿ, ತಿಪ್ಪೇಸ್ವಾಮಿ ಅವರು ಎನ್‌ಎಸ್‌ಯುಐ, ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಸದಸ್ಯರಾಗಿ ಪಕ್ಷಕ್ಕಾಗಿ ಅನೇಕ ವರ್ಷ ದುಡಿದಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ, ತುಂಗಭದ್ರಾ ಹಿನ್ನೀರು ಯೋಜನೆ ಸಕಾರಗೊಳ್ಳಲು ಸ್ಥಳೀಯರಿದ್ದರೆ, ದೆಹಲಿ ಮಟ್ಟದವರೆಗೂ ಹೋರಾಟ ನಡೆಸಲು ಅನುಕೂಲವಾಗಲಿದೆ. ಆದ್ದರಿಂದ ಈ ಬಾರಿ ಅವರಿಗೆ ಟಿಕೆಟ್ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

    ವಿವಿಧ ಸಮುದಾಯಗಳ ಮುಖಂಡರಾದ ಮಂಜಣ್ಣ, ಶಿವಮೂರ್ತಿ, ಉಮೇಶ್, ಅಶೋಕ್, ಚಂದ್ರಣ್ಣ, ಪ್ರಕಾಶ್, ರಾಜೇಶ್, ಪ್ರೇಮ್, ಫಕೃದ್ದೀನ್, ಫಯಾಜ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts