More

    ಲೋಕಸಭೆ ಚುನಾವಣೆಯಲ್ಲಿ ಸರ್ಕಾರಿ ನೌಕರರು ಕಾಂಗ್ರಸ್ ಬೆಂಬಲಿಸಲು:ಬಾಗೂರು ಮಂಜೇಗೌಡ ಮನವಿ

    ಹಾಸನ: ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ ವರದಿ ಜಾರಿ ಮಾಡಿ ಶೇ. 30 ರಷ್ಟು ವೇತನ ಹೆಚ್ಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ನೌಕರರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲಿಸಬೇಕು ಎಂದು ಸರ್ಕಾರಿ ನೌಕರರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಾಗೂರು ಮಂಜೇಗೌಡ ಅವರು ಮನವಿ ಮಾಡಿದರು.
    ಲೋಕಸಭೆ ಚುನಾವಣೆ ಬಳಿಕ ಏಳನೇ ವೇತನ ಆಯೋಗ ಜಾರಿ ಮಾಡಿ, ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಐದು ಗ್ಯಾರಂಟಿಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಕ್ತಿ ನೀಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಸಿದ್ದರಾಮಯ್ಯ ಅವರು 2018ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಆರನೇ ವೇತನ ಆಯೋಗದ ವರದಿ ಜಾರಿ ಮಾಡಿ ಶೇ. 30 ರಷ್ಟು ವೇತನ ಹೆಚ್ಚಿಸಿದ್ದರು. ಲೋಕಸಭೆ ಚುನಾವಣೆ ಬಳಿಕ ಏಳನೇ ವೇತನ ಆಯೋಗ ಜಾರಿ ಮಾಡಿ, ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಲಿದ್ದಾರೆ ಎಂದರು.
    ಲೋಕಸಭೆ ಚುನಾವಣೆಯಲ್ಲಿ ಹಾಸನ ಸೇರಿ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಪೂರಕ ವಾತಾವರಣವಿದೆ. ಕಳೆದ ವಿಧಾನಸಭೆ ಚುನಾವಣೆಗಿಂತ ಲೋಕಸಭೆ ಚುನಾವಣೆಯ ವಾತಾವರಣ ಬದಲಾಗಿದೆ. ಐದು ಗ್ಯಾರಂಟಿ ಅನುಷ್ಠಾನ ಮಾಡಿರುವ ನಮ್ಮ ಪಕ್ಷ, ಈಗ 25 ಗ್ಯಾರಂಟಿ ಘೋಷಿಸಿದೆ. ಇದರಿಂದ ಕಾಂಗ್ರೆಸ್ ಮೇಲೆ ಜನರ ನಂಬಿಕೆ ಹೆಚ್ಚಾಗಿದೆ. ಹಾಸನದಲ್ಲಿ ನಮ್ಮ ಅಭ್ಯರ್ಥಿ ಶ್ರೇಯಸ್ ಪಟೇಲ್ ಗೆಲುವು ಖಚಿತ ಎಂದರು.
    ಮುಖಂಡ ಎಚ್.ಕೆ.ಮಹೇಶ್ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಾಂಪ್ರದಾಯಿಕ ಮತ ಬಂದಿರಲಿಲ್ಲ. ಈ ಬಾರಿ 50 ಸಾವಿರ ಮತ ಕಾಂಗ್ರೆಸ್‌ಗೆ ಬರಲಿವೆ, ಜೆಡಿಎಸ್ ಅಭ್ಯರ್ಥಿ ಬಗ್ಗೆ ಒಳ್ಳೆಯ ಭಾವನೆ ಇಲ್ಲ. ಹಾಗಾಗಿ ಕಾಂಗ್ರೆಸ್‌ಗೆ 15 ಸಾವಿರ ಲೀಡ್ ಬರಲಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅನೇಕರು ಬಿಜೆಪಿ ಸೇರಿದ್ದರು. ಅವರೆಲ್ಲರೂ ಈಗ ಮಾತೃಪಕ್ಷಕ್ಕೆ ವಾಪಾಸ್ಸಾಗಿದ್ದು ಪಕ್ಷದ ಶಕ್ತಿ ವೃದ್ಧಿಯಾಗಿದೆ ಎಂದರು.
    ಜೆಡಿಎಸ್‌ಗೆ ಈ ಚುನಾವಣೆಯಲ್ಲಿ ಯಾವ ಕ್ಷೇತ್ರದಲ್ಲೂ ಲೀಡ್ ಬರುವುದಿಲ್ಲ. ಸಂಸದ ಪ್ರಜ್ವಲ್ ರೇವಣ್ಣ ಅವರ ಐದು ವರ್ಷಗಳ ಆಡಳಿತ ಜನರಿಗೆ ತೃಪ್ತಿ ತಂದಿಲ್ಲ. ಹೀಗಾಗಿ ಕಾಂಗ್ರೆಸ್ ಎಲ್ಲಾ ಕಡೆ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts