More

    ಲೋಕಸಭೆ, ಜಿಪಂ, ತಾಪಂ ಚುನಾವಣೆಗೆ ಬಿಎಸ್ಪಿ ಸಿದ್ಧ

    ಮೂಡಿಗೆರೆ: ವಿಧಾನಸಭೆಗೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ರಾಜ್ಯದ ಜನ ತೀರ್ಮಾನಿಸಿದ್ದರಿಂದ ಬಿಎಸ್ಪಿ ತಲೆ ಬಾಗಬೇಕಾಯಿತು. ಮುಂದಿನ ಲೋಕಸಭೆ ಹಾಗೂ ಜಿಪಂ, ತಾಪಂ ಚುನಾವಣೆಯಲ್ಲಿ ಉತ್ತಮ ಲಿತಾಂಶ ನೀಡಲು ತಯಾರಿ ನಡೆಸಿದೆ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಹೇಳಿದರು.

    ಪಟ್ಟಣದಲ್ಲಿ ಸೋಮವಾರ ಆಯೋಜಿಸಿದ್ದ ಬಿಎಸ್ಪಿ ಕ್ಷೇತ್ರ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ವಿಧಾನಸಭೆಯಲ್ಲಿ ಬಿಎಸ್ಪಿ ಶಾಸಕರಿಲ್ಲದಿದ್ದರೂ ಹಿಂದಿನ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ರಾಜ್ಯದ ಜನರ ಧ್ವನಿಯಾಗಿ ಬಿಎಸ್‌ಪಿ ಕರ್ತವ್ಯ ನಿರ್ವಹಿಸಿದೆ ಎಂದರು.
    ಒಂಬತ್ತು ವರ್ಷದಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜಿಎಸ್‌ಟಿ ಮೂಲಕ ಹಗಲು ದರೋಡೆಗೆ ಇಳಿದಿದೆ. ಅಗತ್ಯ ವಸ್ತುಗಳ ಬೆಲೆ ಏರಿಸಿದೆ. ಜನರನ್ನು ನಿರುದ್ಯೋಗಿಗಳಾಗಿ ಮಾಡಿದೆ. ರಾಜ್ಯದಲ್ಲಿ ಬಿಜೆಪಿಯ 26 ಸಂಸದರಿದ್ದರೂ ಸಂಸತ್‌ನಲ್ಲಿ ರಾಜ್ಯದ ಪರ ಧ್ವನಿ ಎತ್ತದೆ ಕೇಂದ್ರ ಸರ್ಕಾರಕ್ಕೆ ಶರಣಾಗಿದೆ ಎಂದು ಆರೋಪಿಸಿದರು.
    ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷೇತ್ರಕ್ಕೆ ವರ್ಷಕ್ಕೊಮ್ಮೆಯೂ ಬರುತ್ತಿಲ್ಲ. ನಾಲ್ಕು ವರ್ಷದಿಂದ ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಜನ ಬೀದಿಗೆ ಬಿದ್ದಿದ್ದಾರೆ. ಮನೆ, ಜಮೀನು ಕಳೆದುಕೊಂಡ ನಿರಾಶ್ರಿತರಿಗೆ ಮನೆ, ಜಮೀನು ನೀಡುವ ಭರವಸೆ ನೀಡಿದ ಹಿಂದಿನ ಬಿಜೆಪಿ ಸರ್ಕಾರದ ಮಂತ್ರಿಗಳು ತಿರುಗಿ ನೋಡಲಿಲ್ಲ. ನಿರಾಶ್ರಿತರಿಗೆ ಮಾಸಿಕ 5 ಸಾವಿರ ರೂ. ಬಾಡಿಗೆ ನೀಡುವ ಭರವಸೆ ನೀಡಿ ಪಲಾಯನ ಮಾಡಿದ್ದಾರೆ ಎಂದು ದೂರಿದರು.
    ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಜಾಕೀರ್‌ಆಲಿ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮೇಶ್, ಮುಖಂಡರಾದ ಲೋಕವಳ್ಳಿ ರಮೇಶ್, ಮಹೇಶ್, ಕೆ.ಬಿ.ಸುಧಾ, ಯು.ಬಿ.ಮಂಜಯ್ಯ, ಬಿ.ಎಂ.ಶಂಕರ್, ಪಿ.ಕೆ.ಮಂಜುನಾಥ್, ಹಮೀದ್, ಬಕ್ಕಿಮಂಜುನಾಥ್, ಎಂ.ಡಿ.ಶಂಕರ್, ಬಾಬಣ್ಣ, ರಾಮು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts