More

    ಲೋಕೋಪಯೋಗಿ ಇಲಾಖೆಗೆ ರು. 1500 ಸಾವಿರ ಕೋಟಿ ಪ್ರಸ್ತಾವನೆ


    ವಿಜಯವಾಣಿ ಸುದ್ದಿಜಾಲ ಕಲಬುರಗಿ
    ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳಲು ಲೋಕೋಪಯೋಗಿ ಇಲಾಖೆಗೆ ಬಜೆಟ್ನಲ್ಲಿ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪಸ್ತಾವನೆ ಸಲ್ಲಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
    ಶುಕ್ರವಾರ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಲ 9450 ಕೋಟಿ ರೂ. ಅನುದಾನ ಹಂಚಿಕೆಯಾಗಿತ್ತು. ಈ ಸಲ ನೆರೆ ಹಾವಳಿಯಿಂದಾಗಿ ಅಂದಾಜು 7021 ಕೋಟಿ ರೂ. ಮೌಲ್ಯದ ರಸ್ತೆ, ಸೇತುವೆಗಳಿಗೆ ಹಾನಿಯಾಗಿದೆ ಎಂದರು.
    ಏಪ್ರಿಲ್ ಒಳಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಲಾಗುವುದು. ಶಾಸಕರು ಅಥವಾ ಸಚಿವರ ನೇಮಕ ಸಂಬಂಧ ಕಾಯ್ದೆಗೆ ಸಣ್ಣ ತಿದ್ದುಪಡಿ ತರುವ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ವಲ್ಪ ವಿಳಂಬವಾಗಿದೆ. ಹಿರಿಯರಾದ ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆಯ ಕಲ್ಯಾಣ ಕನರ್ಾಟಕ ಮಾನವ ಸಂಪನ್ಮೂಲ, ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಕ್ಕೆ ಪ್ರತ್ಯೇಕ ಅನುದಾನ ನೀಡಲಾಗುವುದು ಎಂದು ಹೇಳಿದರು.
    ತೊಗರಿಯಂತೆ ಕಡಲೆ ಕಾಳಿಗೂ ಪ್ರೋತ್ಸಾಹಧನ ನೀಡುವ ಬಗ್ಗೆ ಸಂಪುಟದ ಉಪ ಸಮಿತಿಯಲ್ಲಿ ಚರ್ಚೆಯಾಗಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳುವ ಮೂಲಕ ಸರ್ಕಾರ ರೈತರ ನೆರವಿಗೆ ಆಗಮಿಸಲಿದೆ ಎಂದರು.
    ಶಾಸಕರಾದ ಬಿ.ಜಿ. ಪಾಟೀಲ್, ಬಸವರಾಜ ಮುತ್ತಿಮೂಡ, ದತ್ತಾತ್ರೇಯ ಪಾಟೀಲ್ ರೇವೂರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಪ್ರಮುಖರಾದ ಚಂದು ಪಾಟೀಲ್, ರಾಜು ವಾಡೇಕರ್, ರಾಘವೇಂದ್ರ ಕುಲಕರ್ಣಿ ಇತರರಿದ್ದರು.

    20 ಕ್ವಿಂಟಾಲ್ ತೊಗರಿ ಖರೀದಿ
    ಕೇಂದ್ರದ ಆದೇಶ ನಿರೀಕ್ಷೆಯಲ್ಲಿ
    ತೊಗರಿ ಇಳುವರಿ ಉತ್ತಮವಾಗಿ ಬಂದಿದ್ದರಿಂದ ಬೆಂಬಲ ಬೆಲೆ ಯೋಜನೆಯಡಿ 10 ಕ್ವಿಂಟಾಲ್ ಬದಲಿಗೆ 20 ಕ್ವಿಂಟಾಲ್ ಖರೀದಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಕೇಂದ್ರ ಸಕರ್ಾರಕ್ಕೆ ಮನವಿ ಸಲ್ಲಿಸಿದ್ದು, ಆದೇಶದ ನಿರೀಕ್ಷೆಯಲ್ಲಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಕಳೆದ ಸಲ ರಾಜ್ಯ ಸಕರ್ಾರದ 300 ರೂ. ಸೇರಿ ಕ್ವಿಂಟಾಲ್ಗೆ 6100 ರೂ. ನೀಡಲಾಗಿತ್ತು. ಈ ವರ್ಷ ಉತ್ತಮ ಮಳೆಯಾಗಿದ್ದರಿಂದ ಕಲಬುರಗಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಉತ್ತಮ ಇಳುವರಿ ಬಂದಿದೆ. ಕೇಂದ್ರ ಸಕರ್ಾರ ಅನುಮತಿ ನೀಡಿದ ಬೆನ್ನಲ್ಲೇ 20 ಕ್ವಿಂಟಾಲ್ ಖರೀದಿಸಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಪ್ರವಾಹ ಪರಿಹಾರ ಕೆಲಸಗಳಿಗೆ 2.5 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಜೇವಗರ್ಿ ಮತ್ತು ಅಫಜಲಪುರ ನೆರೆಪೀಡಿತ ಪ್ರದೇಶಗಳಲ್ಲಿ ತಾತ್ಕಾಲಿಕ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

    ಮಹದಾಯಿ ಸಮಸ್ಯೆಗೆ ಶಾಶ್ವತ ಪರಿಹಾರ
    ಕನರ್ಾಟಕ-ಗೋವಾ-ಮಹಾರಾಷ್ಟ್ರ ನಡುವಿನ ನೀರು ಹಂಚಿಕೆ ಕುರಿತು ಮಹದಾಯಿ ನ್ಯಾಯಾಧಿಕರಣದ ಅಂತಿಮ ಐತೀಪರ್ಿನ ಆದೇಶದಂತೆ ಕೇಂದ್ರ ಸಕರ್ಾರ ಅಧಿಸೂಚನೆ ಪ್ರಕಟಿಸಿದ್ದರಿಂದ ಶಾಶ್ವತ ಪರಿಹಾರ ಸಿಕ್ಕಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಸಂತಸ ವ್ಯಕ್ತಪಡಿಸಿದರು. 13.42 ಟಿಎಂಸಿ ನೀರು ರಾಜ್ಯಕ್ಕೆ ಹಂಚಿಕೆಯಾಗುವ ಮೂಲಕ ಕನರ್ಾಟಕ ಹಾಗೂ ಈ ನಾಡಿನ ರೈತರ ಮತ್ತು ಸಕರ್ಾರದ ಕಾನೂನು ಹೋರಾಟಕ್ಕೆ ಸಿಕ್ಕ ಜಯ ಇದಾಗಿದೆ ಎಂದು ಬಣ್ಣಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts