More

    ಲೋಕ ಅದಾಲತ್ ಜಾಗೃತಿ ಮೂಡಿಸಿ

    ಬೀದರ್: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಹೆಚ್ಚಿನ ಪ್ರಕರಣ ಇತ್ಯರ್ಥಕ್ಕೆ ವಿವಿಧ ಇಲಾಖೆಗಳ ಸಹಭಾಗಿತ್ವ ಮುಖ್ಯವಾಗಿದೆ. ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಕಡಿಮೆ ಖರ್ಚಿನಲ್ಲಿ ಹಾಗೂ ತ್ವರಿತ ನ್ಯಾಯಕ್ಕಾಗಿ ಅದಾಲತ್ ನ ಲಾಭ ಪಡೆಯುವಂತೆ ಮಾಹಿತಿ ಒದಗಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಕೆ. ಕನಕಟ್ಟೆ ಹೇಳಿದರು.

    ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಈ ಅದಾಲತ್ ಕುರಿತು ಬಸ್, ರೈಲ್ವೆ ನಿಲ್ದಾಣ ಮತ್ತು ನಗರಸಭೆಯ ಕಸ ನಿರ್ವಹಣೆ ವಾಹನಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳುವುದರ ಜತೆಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

    ರಾಷ್ಟ್ರೀಯ ಲೋಕ ಅದಾಲತ್ ಪ್ರತಿ ಎರಡರಿಂದ ಮೂರು ತಿಂಗಳಿಗೊಮ್ಮೆ ನಡೆಯುತ್ತದೆ. ಜಿಲ್ಲಾ ನ್ಯಾಯಾಲಯ ಹಾಗೂ ಆಯಾ ತಾಲೂಕು ಕೋಟ್೯ಗಳಲ್ಲಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಮ್ಮಿಕೊಳ್ಳಲಾಗುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು. ಅದಾಲತ್ ಕುರಿತ ಮಾಹಿತಿಗಾಗಿ 1800-425-90900 ಸಂಖ್ಯೆಗೆ ಕರೆ ಮಾಡಬಹುದು ಎಂದು ತಿಳಿಸಿದರು.

    ತಹಸೀಲ್ದಾರ್ ಅಣ್ಣಾರಾವ ಪಾಟೀಲ್, ತಾಪಂ ಇಒ ಮಾಣಿಕರಾವ್ ಪಾಟೀಲ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ, ನಗರಸಭೆ ಪ್ರಭಾರಿ ಆಯುಕ್ತ ರವೀಂದ್ರ ಕಾಂಬ್ಳೆ, ಸಾರಿಗೆ ಇಲಾಖೆ ಅಧಿಕಾರಿ ನರಸಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts