More

    ಲೋಕ ಸಮರಕ್ಕೆ ಸಿದ್ಧತೆ ಮಾಡಿಕೊಳ್ಳಿ


    ಯಾದಗಿರಿ: ಭಾರತವು ಮತ್ತಷ್ಟು ಗಟ್ಟಿಯಾಗಲು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಅದಕ್ಕಾಗಿ ಕಾರ್ಯಕರ್ತರು ಪ್ರತಿ ಮನೆ ಮನೆ ಬಾಗಿಲಿಗೆ ತೆರಳಿ ಕೇಂದ್ರ ಸರಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಬಿಜೆಪಿ ಗ್ರಾಮ ಚಲೋ ಅಭಿಯಾನದ ವಿಭಾಗ ಸಂಚಾಲಕ ಅಶೋಕ ಬಾಗಲಿ ಕಿವಿಮಾತು ಹೇಳಿದರು.

    ಗುರುವಾರ ನಗರದ ಎನ್ವಿಂ ಹೋಟೆಲ್ ಸಭಾಂಗಣದಲ್ಲಿ ಪಕ್ಷದ ನಗರ ಮತ್ತು ಗ್ರಾಮೀಣ ಮಂಡಲದಿಂದ ಜಂಟಿಯಾಗಿ ಹಮ್ಮಿಕೊಂಡಿದ್ದ ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬುದು ಇಡೀ ದೇಶದ ಜನರ ಆಶಯವಾಗಿದೆ. ಹೀಗಾಗಿ ನಾವುಗಳು ಲೋಕ ಸಮರಕ್ಕೆ ಸಿದ್ಧತೆ ಮಾಡಿಕೊಳ್ಳಬೇಕಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸಕರ್ಾರ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದ ಆಡಳಿತ ನಡೆಸಿದೆ ಎಂದರು.

    ನೂರಾರು ಜನೋಪಯೋಗಿ ಯೋಜನೆಗಳು ಜನರ ಮನೆ ಬಾಗಿಲಿಗೆ ತಲುಪಿವೆ. ವಿಶ್ವದಲ್ಲಿಯೇ ಭಾರತ ಸಶಕ್ತ ಹಾಗೂ ಬಲಿಷ್ಠ ರಾಷ್ಟ್ರವಾಗುತ್ತಿದೆ. ಪ್ರಧಾನಿ ಮೋದಿಯವರಿಂದ ಜಗತ್ತಿನ ಬಲಾಢ್ಯ ರಾಷ್ಟ್ರಗಳು ಪ್ರೇರಣೆಗೊಂಡು ಭಾರತದ ಮಾದರಿಯಲ್ಲಿ ಆಡಳಿತ ನಡೆಸುತ್ತಿವೆ. ಜೆಜೆಎಂ, ಆಯುಷ್ಠಾನ್ ಭಾರತ, ಉಜ್ವಲಾ ಯೋಜನೆ, ಕಿಸಾನ್ ಸಮ್ಮಾನ, ಪಿಎಂ ವಿಶ್ವಕರ್ಮ ಯೋಜನೆ, ನಾರಿ ಶಕ್ತಿ ಸೇರಿ ನೂರಾರು ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.

    ಯುವ ಮುಖಂಡ ಮಹೇಶರಡ್ಡಿ ಮುದ್ನಾಳ್, ಜ.22 ರಂದು ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮೂತರ್ಿ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಮೂಲಕ ಸುಮಾರು 500 ವರ್ಷಗಳ ಭಾರತೀಯರ ಕನಸನ್ನು ಮೋದಿ ಈಡೇರಿಸಿದ್ದಾರೆ. ದೇಶಾದ್ಯಂತ ಬಿಜೆಪಿ ಪರ ಅಲೆಯಿದ್ದು, ಸತತ 3ನೇ ಅವಧಿಗೆ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts