More

    ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ಆಗ್ರಹ; ಪುಂಜಾಲಕಟ್ಟೆ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

    ಸಾಗರ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪುಂಜಾಲಕಟ್ಟೆ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ತಾಲೂಕು ವಕೀಲರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
    ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ನಾಗರಾಜ್, ವಕೀಲರ ಮೇಲೆ ಪದೇ ಪದೆ ಹಲ್ಲೆ ನಡೆಯುತ್ತಿದೆ. ವಕೀಲರು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಾಗದ ದುಸ್ಥಿತಿ ನಿರ್ಮಾಣವಾಗುತ್ತಿದೆ.ತಕ್ಷಣ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ವಕೀಲರ ಸಂರಕ್ಷಣಾ ಕಾಯ್ದೆಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
    ಹಿರಿಯ ವಕೀಲ ಕೆ.ಎನ್.ಶ್ರೀಧರ್ ಮಾತನಾಡಿ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವುದೇ ವಕೀಲರು ಮಾಡುತ್ತಿರುವ ಅಪರಾಧ ಎನ್ನುವಂತೆ ಆಗಿದೆ. ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ನಡೆಸಿರುವುದು ಇದರ ಮುಂದುವರಿದ ಭಾಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಆಕ್ರೋಶ: ವಕೀಲರ ಸಂಘಟನೆಯಿಂದ ಮನವಿ ನೀಡಲು ಬಂದಾಗ ಕಚೇರಿ ಆವರಣದಲ್ಲಿ ಯಾವುದೇ ಸಿಬ್ಬಂದಿ ಇಲ್ಲದೇ ಇರುವುದು ಸಂಘಟನೆಯ ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು. ನಂತರ ತಾಲೂಕು ಕಚೇರಿಯಲ್ಲಿದ್ದ ಉಪವಿಭಾಗಾಧಿಕಾರಿಗಳು ತಮ್ಮ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸಿದರು. ಹಿರಿಯ ವಕೀಲ ಎಂ.ಎಸ್.ಗೌಡರ್ ಮಾತನಾಡಿ, ಸಾರ್ವಜನಿಕರು ಮನವಿ ನೀಡಲು ಬಂದಾಗ ಕಚೇರಿಯ ಸಿಬ್ಬಂದಿ ವ್ಯವಸ್ಥಿತವಾಗಿ ಸಹಕರಿಸಬೇಕು. ಈ ಬಗ್ಗೆ ಗಮನ ಹರಿಸಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts