More

    ವಕೀಲರ ಸಾಮಾಜಿಕ ಜವಾಬ್ದಾರಿ ಹೆಚ್ಚಾಗಿದೆ

    ಚಿತ್ರದುರ್ಗ: ದೇಶದ ಸ್ವಾತಂತ್ರ್ಯಕ್ಕಾಗಿ ನಡೆದಿದ್ದ ಹೋರಾಟದಲ್ಲಿ ವಕೀಲರು ಮುಂಚೂಣಿಯಲ್ಲಿದ್ದರು ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಹೇಳಿದರು.
    ನಗರದ ಜಿಲ್ಲಾ ವಕೀಲರ ಭವನಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭ ಮಾತನಾಡಿ, ಸ್ವತಂತ್ರ ಭಾರತದಲ್ಲಿ ಆಡಳಿತ ಚುಕ್ಕಾಣಿ ಹಿಡಿದವರು, ದೇಶದ ಅಭಿವೃದ್ಧಿಗೆ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿದವರಲ್ಲಿ ಬಹುತೇಕರು ವಕೀಲರೇ ಆಗಿದ್ದು, ಆ ಗತವೈಭವ ಮರುಕಳಿಸಬೇಕಿದೆ ಎಂದರು.
    ಸಿದ್ದರಾಮಯ್ಯ ಸ್ವತಃ ವಕೀಲರಾಗಿದ್ದ ಕಾರಣ ಭ್ರಷ್ಟಚಾರಮುಕ್ತ ಆಡಳಿತ ನೀಡಲು ಸಾಧ್ಯವಾಗಿದೆ. ಅವರನ್ನು ಟೀಕಿಸಲು ಪ್ರತಿಪಕ್ಷದವರು ಹತ್ತಾರು ಬಾರಿ ಯೋಚಿಸುವಂತಾಗಿದೆ. ಎಸ್.ನಿಜಲಿಂಗಪ್ಪ, ಎಸ್.ಬಂಗಾರಪ್ಪ ಮೊದಲಾದ ಪ್ರಮುಖರು ವಕೀಲರಾಗಿದ್ದರು ಎಂದು ಹೇಳಿದರು.
    ವಕೀಲರ ಸಾಮಾಜಿಕ ಜವಾಬ್ದಾರಿ ಹೆಚ್ಚಾಗಿದೆ. ಸಮಾಜದ ಸ್ವಾಸ್ಥ್ಯ ಕೆಡಿಸುವ ಚಟುವಟಿಕೆಗಳ ವಿರುದ್ಧ ಕಾನೂನು ಹೋರಾಟ ನಡೆಸುವ ಶಕ್ತಿ ಅವರಲ್ಲಿದೆ ತಮ್ಮಲ್ಲಿದೆ ಎಂದರು.
    ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಮಾಜಿ ಅಧ್ಯಕ್ಷ ಶಿವುಯಾದವ್, ಮಾಜಿ ಪ್ರಧಾನ ಕಾರ್ಯದರ್ಶಿ ದಯಾನಂದ್, ಕಾಂಗ್ರೆಸ್ ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ಸುದರ್ಶನ್ ಯಾದವ್, ವಕೀಲರಾದ ಸಿ.ಎಂ.ವೀರಣ್ಣ, ಲೋಕೇಶ್, ಕುಮಾರ್, ಚಂದ್ರಕುಮಾರ್, ಬೀಸನಹಳ್ಳಿ ಜಯಪ್ಪ, ಮಂಜುಳಾ, ಶಿವಕುಮಾರ್, ರಾಮು, ಮಾಲತೇಶ್, ರಾಮು ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts