More

    ವಡಿಗೇರಾದಲ್ಲಿ ಸಚಿವ ಅಶೋಕ ಗ್ರಾಮ ವಾಸ್ತವ್ಯ

    ಯಾದಗಿರಿ: ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ ಜಿಲಾಧ್ಲಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ನಿಮಿತ್ತ ಮಾಚರ್್ನಲ್ಲಿ ವಡಿಗೇರಾ ಪಟ್ಟಣದಲ್ಲಿ ಕಂದಾಯ ಸಚಿವ ಆರ್.ಅಶೋಕ ವಾಸ್ತವ್ಯ ಹೂಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ತಿಳಿಸಿದರು.

    ಬುಧವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಮಾತನಾಡಿ, ಗ್ರಾಮದ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿ, ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂದಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಸಕರ್ಾರ ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಅನುಸರಿಸಬೇಕು ಎಂದು ನಿದರ್ೇಶನ ನೀಡಿದರು.

    ಅಂದು ವಡಿಗೇರಾ ಗ್ರಾಮ ವಾಸ್ತವ್ಯದಲ್ಲಿ ವಿವಿಧ ಇಲಾಖೆಗಳು ತಮ್ಮ-ತಮ್ಮ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಬೇಕು. ಪಹಣಿಯಲ್ಲಿನ ಲೋಪದೋಷ ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸಬೇಕು ಎಂದರು.

    ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸುವುದು. ಸಕರ್ಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವುದು. ಆಧಾರ್ ಕಾಡರ್್ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಇನ್ನಿತರೆ ಸಕರ್ಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಇನ್ನಿತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

    ಎಲ್ಲ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾಡರ್್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು. ಕಾಡರ್್ ಪಡೆಯದಿದ್ದಲ್ಲಿ ನಿಯಮಾನುಸಾರ ಸೌಲಭ್ಯ ಒದಗಿಸಲು ಆದೇಶಿಸಬೇಕು. ಗುಡಿಸಲು ರಹಿತ ವಾಸದ ನಿಮರ್ಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸಕರ್ಾರದ ವಿವಿಧ ಯೋಜನೆಗಳಡಿ ಮನೆಕಟ್ಟಲು ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಕಾರಿಗೆ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts