More

    ವಡೆಯರ ಮಲ್ಲಾಪುರದಲ್ಲಿ ಕೋವಿಡ್ ಕೇರ್ ಸೆಂಟರ್

    ಲಕ್ಷ್ಮೇಶ್ವರ: ತಾಲೂಕು ವ್ಯಾಪ್ತಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಮೀಪದ ವಡೆಯರಮಲ್ಲಾಪೂರ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 40 ಹಾಸಿಗೆ ಸಾಮರ್ಥ್ಯವುಳ್ಳ ಕೋವಿಡ್ ಕೇರ್ ಸೆಂಟರ್ ತೆರೆಯಲು ಎಲ್ಲ ಸಿದ್ಧತೆ ಮಾಡಲಾಗಿದೆ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

    ಮುರಾರ್ಜಿ ಶಾಲೆಗೆ ಸೋಮವಾರ ಭೇಟಿ ನೀಡಿ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ‘ತಾಲೂಕಿನಲ್ಲಿ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಎಲ್ಲರಿಗೂ ಜಿಮ್್ಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿಲ್ಲ. ಅದಕ್ಕಾಗಿ ಈಗಾಗಲೇ ಶಿರಹಟ್ಟಿ ತಾಲೂಕಿನ ವರವಿಯ ಕಿತ್ತೂರರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ, ಇಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗಿ ಚಿಕಿತ್ಸೆಗೆ ತೊಂದರೆಯಾಗಬಹುದೆಂಬ ಉದ್ದೇಶದಿಂದ ವಡೆಯರ ಮಲ್ಲಾಪುರ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗುತ್ತಿದೆ’ ಎಂದರು.

    40 ಬೆಡ್​ಗಳ ಈ ತಾತ್ಕಾಲಿಕ ಆಸ್ಪತ್ರೆಯಲ್ಲಿ ಅವಶ್ಯವಿರುವ ಎಲ್ಲ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ಈ ಭಾಗದಲ್ಲಿ ಸೋಂಕಿಗೆ ಒಳಗಾಗುವವರಿಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಗುಣಮಟ್ಟದ ಆಹಾರ, ಅವಶ್ಯಕ ಸಿಬ್ಬಂದಿ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗುತ್ತಿದೆ ಎಂದರು.

    ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಮಾತನಾಡಿ, ‘ವಡೆಯರ ಮಲ್ಲಾಪುರ ವಸತಿ ಶಾಲೆಯಲ್ಲಿ ಕೋವಿಡ್ ಕೇರ್​ನ ತಾತ್ಕಾಲಿಕ ಆಸ್ಪತ್ರೆಯಲ್ಲಿ ಈಗಾಗಲೇ ಅವಶ್ಯಕ ಭೌತಿಕ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ’ ಎಂದರು.

    ಈ ವೇಳೆ ವಸತಿ ಶಾಲೆಯ ಮುಖ್ಯೋಪಾದ್ಯಾಯ ಎಸ್.ಕೆ. ಹತ್ತಿಕಾಳ, ಬಿಜೆಪಿ ನಗರ ಘಟಕದ ಅಧ್ಯಕ್ಷ ದುಂಡೇಶ ಕೊಟಗಿ, ಕಾರ್ಯದರ್ಶಿ ವಿಜಯ ಕುಂಬಾರ, ಪ್ರಕಾಶ ಮಾದನೂರ, ಪ್ರವೀಣ ಬೋಮಲೆ, ಬಿಜೆಪಿ ಮಂಡಳ ಯುವಮೋರ್ಚಾ ಅಧ್ಯಕ್ಷ ನವೀನ ಹಿರೇಮಠ, ವಿಶಾಲ ಬಟಗುರ್ಕಿ, ಸಂಗಮೇಶ ಬೆಳವಲಕೊಪ್ಪ, ಗಂಗಾಧರ ಕರ್ಜೆಕಣ್ಣವರ, ಕಂದಾಯ ನಿರೀಕ್ಷಕ ಬಿ.ಎಂ. ಕಾತರಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts