More

    ವರದಾ ಏತ ನೀರಾವರಿಯಿಂದ ಕೆರೆಗಳಿಗೆ ನೀರು

    ಆನವಟ್ಟಿ: ಮುಂಗಾರು ಕೈ ಕೊಟ್ಟಿದ್ದು ರೈತರು ತೊಂದರೆಗೆ ಸಿಲುಕಿದ್ದಾರೆ. ಈಗಾಗಲೇ ವರದಾ ನದಿಯಿಂದ ಏತ ನೀರಾವರಿ ಯೋಜನೆಯಿಂದ ಕೆರೆಗಳಿಗೆ ನೀರು ಬಿಡಲಾಗಿದೆ. ವ್ಯರ್ಥವಾಗಿ ಹರಿದು ಹೋಗುತ್ತಿದ್ದ ನದಿ ನೀರನ್ನು ಕೆರೆ ಸಂಗ್ರಹಕ್ಕೆ ಉಪಯೋಗಿಸಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

    ಆನವಟ್ಟಿಯ ಸಚಿವರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಯಲಿವಾಳ, ಬೆಣ್ಣಿಗೆರೆ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಈಗಾಗಲೇ ಎರಡು ಬೋರ್‌ವೆಲ್‌ಗಳನ್ನು ಕೊರೆಯಿಸಲಾಗಿದೆ. ಈ ಭಾಗಗಳಲ್ಲಿ ಮಳೆಯ ನೀರಿನ ಕೊರತೆಯಿಂದಾಗಿ ರೈತರು ಹೊಸದಾಗಿ ಹಚ್ಚಿದ್ದ ಅಡಕೆ ಗಿಡಗಳು ಒಣಗಿ ಹೋಗಿವೆ. ಅಲ್ಲದೆ ತಾಲೂಕಿನಲ್ಲಿ ನೀರಿನ ಕೊರತೆಯಿಂದಾಗಿ ಅಡಕೆ ಬೆಳೆ ಇಳುವರಿ ಕುಂಠಿತವಾಗಿದೆ. ಅಡಕೆ ಬೆಳೆಯನ್ನೂ ಬೆಳೆವಿಮೆ ವ್ಯಾಪ್ತಿಗೆ ಸೇರಿಸಬೇಕೆಂದು ರೈತರ ಒತ್ತಡವಿದ್ದು, ಸದನದಲ್ಲಿ ಸರ್ಕಾರದ ಗಮನಕ್ಕೆ ಬಂದಿದೆ. ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದರು.
    ರಾಜ್ಯಕ್ಕೆ ಮುಂಗಾರು ವಿಳಂಬವಾಗಿದ್ದರಿಂದ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಎಲ್ಲ ಸಾಧ್ಯತೆಗಳನ್ನು ತಜ್ಞರು ನೀಡಿದ್ದಾರೆ. ಮುಂದಿನ ಮಳೆಗಳ ಬಗ್ಗೆ ರೈತರು ಚಿಂತಿಸುವ ಅಗತ್ಯವಿಲ್ಲ. ಮಳೆಯಾಗುವ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts